ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಹೊಸ ಶಿಕ್ಷಣ ನೀತಿ 2020 ಯಲ್ಲಿ ಪ್ರಸ್ತಾಪಿಸಲಾಗಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ಸರ್ಕಾರವು ತಿರಸ್ಕರಿಸಿದೆ.
ತಮಿಳುನಾಡಿನಲ್ಲಿ ಈಗ ಅಸ್ತಿತ್ವದಲ್ಲಿರುವ ದ್ವಿಭಾಷಾ ಶಿಕ್ಷಣ ನೀತಿಯನ್ನು ಬದಲಿಸಲಾಗುವುದಿಲ್ಲ ಎಂದಿದೆ ತಮಿಳುನಾಡು ಸರ್ಕಾರ. ಕ್ಯಾಬಿನೆಟ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯಮಂತ್ರಿ ಕೆ. ಪಳನಿ ಸ್ವಾಮಿ ಅವರು ಮಾತನಾಡುತ್ತಾ ತಮಿಳು ನಾಡಿನಲ್ಲಿ ಹಲವು ದಶಕಗಳಿಂದಲೇ ದ್ವಿಭಾಷಾ ನೀತಿಯನ್ನು ಅನುಸರಿಸಿಕೊಂಡು ಬರುತ್ತಿದ್ದು ಅದರಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಅವರು ತಿಳಿಸಿದ್ದಾರೆ.

ತಮಿಳುನಾಡು ಸರ್ಕಾರವು ಕೇಂದ್ರದ ತ್ರಿಭಾಷೆಯ ನೀತಿಯನ್ನು ಎಂದಿಗೂ ಅನುಮತಿಸುವುದಿಲ್ಲ ಎಂದು ಖಚಿತವಾಗಿ ಹೇಳಿರುವ ರಾಜ್ಯವು ತನ್ನ ಉಭಯ ಭಾಷಾ ನೀತಿಯೊಂದಿಗೆ (ತಮಿಳು ಮತ್ತು ಇಂಗ್ಲಿಷ್) ಮುಂದುವರಿಯುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ತಮಿಳುನಾಡಿನಲ್ಲಿ ದಶಕಗಳಿಂದ ಕೂಡಾ ರಾಷ್ಟ್ರ ಭಾಷೆ ಹಿಂದಿಗೆ ಅನ್ಯ ರಾಜ್ಯಗಳ ಹಾಗೆ ಪ್ರಾಧಾನ್ಯತೆಯನ್ನು ನೀಡದೇ ಇರುವುದನ್ನು ನಾವು ನೋಡಬಹುದಾಗಿದೆ‌.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here