ಮದುವೆಗೂ ಮೊದಲೇ ಖ್ಯಾತ ಕ್ರಿಕೆಟರ್ ಹಾರ್ಧಿಕ್ ಪಾಂಡ್ಯ ಮತ್ತು ನಟಿ ನತಾಶಾ ಅಪ್ಪ ಅಮ್ಮ ಆಗುತ್ತಿದ್ದು ಈ ಸುದ್ದಿಯನ್ನು ಅವರೇ ಸೋಶಿಯಲ್ ಮೀಡಿಯ ಮೂಲಕ ಹಂಚಿಕೊಂಡಿದ್ದಾರೆ ಹಾರ್ದಿಕ್ ಪಾಂಡ್ಯ ತಂದೆಯಾಗುತ್ತಿರುವ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದು, ಶೀಘ್ರವೇ ಹೊಸ ಜೀವವನ್ನು ಸ್ವಾಗತಿಸಲು ಉತ್ಸುಕರಾಗಿದ್ದಾಗಿ ತಿಳಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಗೆಳತಿ ನತಾಶಾರೊಂದಿಗೆ ಇರೋ ಫೋಟೋವನ್ನು ಪೋಸ್ಟ್ ಮಾಡಿರುವ ಹಾರ್ದಿಕ್ ಪಾಂಡ್ಯ, ನತಾಶಾ ಮತ್ತು ನಾನು ಒಟ್ಟಿಗೆ ಉತ್ತಮ ಪ್ರಯಾಣವನ್ನು ಹೊಂದಿದ್ದೇವೆ. ಈ ಬಾಂದವ್ಯ ಮತ್ತಷ್ಟು ಉತ್ತಮಗೊಳ್ಳುವತ್ತ ಹೊರಟಿದ್ದು, ಶೀಘ್ರವೇ ನಮ್ಮ ಜೀವನಕ್ಕೆ ಹೊಸ ಜೀವವನ್ನು ಸ್ವಾಗತಿಸಲು ಉತ್ಸುಕರಾಗಿದ್ದೇವೆ.

ನಮ್ಮ ಜೀವನದ ಈ ಹೊಸ ಹಂತಕ್ಕಾಗಿ ರೋಮಾಂಚನಗೊಂಡಿದ್ದು, ನಿಮ್ಮ ಆಶೀರ್ವಾದ ಮತ್ತು ಶುಭಾಶಯಗಳನ್ನು ಕೋರುತ್ತೇವೆ ಎಂದು ಬರೆದುಕೊಂಡಿದ್ದಾರೆ.ಬಹು ಸಮಯದಿಂದ ಒಟ್ಟಿಗೆ ಓಡಾಡುತ್ತಿದ್ದ ಹಾರ್ದಿಕ್ ಪಾಂಡ್ಯ ಹಾಗೂ ಸರ್ಬಿಯನ್ ಮಾಡೆಲ್, ನಟಿ ನತಾಶಾ ಸ್ಟಾಂಕೋವಿಕ್ ಹೊಸ ವರ್ಷದ ಮೊದಲ ದಿನ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಕುರಿತ ವಿಡಿಯೋ ಹಾಗೂ ಫೋಟೋವನ್ನು ಹಂಚಿಕೊಂಡು ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದರು.ಟೀಂ ಇಂಡಿಯಾ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಅವರು ದಕ್ಷಿಣ ಆಫ್ರಿಕಾ ವಿರುದ್ಧದ

ಏಕದಿನ ಸರಣಿಯಲ್ಲಿ ತಂಡಕ್ಕೆ ಕಮ್‍ಬ್ಯಾಕ್ ಮಾಡಿದ್ದರು. ಆದರೆ ಕೊರೊನಾದಿಂದಾಗಿ ಸರಣಿಯನ್ನು ಮುಂದೂಡಲಾಯಿತು. ಆದರೆ ಮುಂಬರುವ ದಿನಗಳಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸ್ಥಾನ ಭದ್ರಪಡಿಸಿಕೊಳ್ಳಲಿದ್ದಾರೆ. ಅಲ್ಲದೇ ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸವನ್ನು ಹೊಂದಿದ್ದರು. ಆದರೆ ಕೊರೊನಾ ಕಾರಣದಿಂದ ಐಪಿಎಲ್ ಮುಂದೂಡಲಾಗಿತ್ತು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here