ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ ಅವರು ನೆರೆ ಪರಿಹಾರ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕದಲ್ಲಿ ಹಣವಿದೆ , ಕೇಂದ್ರದ ನೆರವನ್ನು ಕೋರುವುದು ಸರಿಯಲ್ಲ‌ ಎಂದು ನೀಡಿದ್ದ ಹೇಳಿಕೆಗೆ, ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ತಮ್ಮ ಸಿಟ್ಟನ್ನು ಹೊರಹಾಕುತ್ತಾ, ಬೇಜವಾಬ್ದಾರಿ ಹೇಳಿಕೆ ನೀಡಿದರೆ ನಾನು ಸುಮ್ಮನೆ ಕೂರುವುದಿಲ್ಲ. ಬೇಜವಾಬ್ದಾರಿಯುತ ಹೇಳಿಕೆಗೆ ಉತ್ತರ ಕರ್ನಾಟಕ ಕಣ್ಣು ಮುಚ್ಚಿ ಕೂರುವುದಿಲ್ಲ ಎಂದು ಹೇಳಿದ್ದಾರಲ್ಲದೆ ಸಂಸದ ತೇಜಸ್ವಿ ಸೂರ್ಯ ನೀಡಿರುವ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಕೂಡಾ ಅವರು ಆಗ್ರಹಿಸಿದ್ದಾರೆ. ವಿಜಯಪುರ ನಗರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿರುವ ಶಾಸಕರು ನಾವೇನು ಕೇಂದ್ರ ಸರ್ಕಾರದಿಂದ ಭಿಕ್ಷೆ ನೀಡಿ ಎಂದು ಕೇಳುತ್ತಿಲ್ಲ ಎಂದಿದ್ದಾರೆ.

ಇಲ್ಲಿ ಸಂತ್ರಸ್ತರು ಕಣ್ಣೀರು ಹಾಕುತ್ತಿದ್ದು, ಇಂತಹ ಸಂದರ್ಭದಲ್ಲಿ ಬೇಜವಾಬ್ದಾರಿಯುತ ಹೇಳಿಕೆ ನೀಡುವವರು ಒಂದು ಸಲ ಸ್ಥಳಕ್ಕೆ ಬಂದು ಜನರ ಕಷ್ಟ ನೋಡಲಿ ಎಂದು ತಮ್ಮದೇ ಪಕ್ಷದ ಸಂಸದನ ವಿರುದ್ಧವೇ ಯತ್ನಾಳ್ ಅವರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಉತ್ತರ ಕರ್ನಾಟಕದ ಬಗ್ಗೆ ಕೀಳಾಗಿ ಮಾತನಾಡುವುದು ಸರಿಯಲ್ಲ, ಇಲ್ಲಿನ ನಾಯಕರು ಸತ್ತಿಲ್ಲ ಎಂದಿರುವ ಅವರು, ಉತ್ತರ ಕರ್ನಾಟಕಕ್ಕೆ ಅನ್ಯಾಯವಾದರೆ ನಾನು ದನಿ ಎತ್ತುತ್ತೇನೆ ಎಂದಿದ್ದಾರೆ. ಕೇಂದ್ರ ಇಲ್ಲಿನ ಜನರಿಗಾಗಿ ತಕ್ಷಣ ಐದು ಸಾವಿರ ಕೋಟಿ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಉತ್ತರ ಕರ್ನಾಟಕದ ಜನರಿಗಾಗಿ ಎಲ್ಲ ಸಂಸದರು ಹಾಗೂ ಸಚಿವರು ಒಟ್ಟಾಗಿ ಪ್ರಧಾನಿ ನರೇಂದ್ರ ಮೋದಿ ಬಳಿ ನಿಯೋಗ ತೆಗೆದುಕೊಂಡು ಹೋಗಬೇಕು. ಈ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಕೋರಿರುವ ಅವರು ಕೇಂದ್ರ ಸರ್ಕಾರ ನಮ್ಮ ನ್ಯಾಯಯುತ ಬೇಡಿಕೆಯನ್ನು ಆದಷ್ಟು ಬೇಗ ಈಡೇರಿಸಬೇಕು ಎಂದು ಒತ್ತಾಯವನ್ನು ಮಾಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here