ಸಂಸದ ತೇಜಸ್ವಿ ಸೂರ್ಯ ಅವರ ಎದೆ ಬಗೆದರೆ ಏನೂ ಸಿಗಲ್ಲ, ಅದೇ ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ನಮ್ಮ ಎದೆ ಬಗೆದು ನೋಡಿ ಅಲ್ಲಿ ತ್ರಿವರ್ಷ ಧ್ವಜ ಕಾಣಿಸುತ್ತದೆ ಎಂಬ ಮಾತನ್ನು ಹೇಳಿದ್ದಾರೆ ಕಾಂಗ್ರೆಸ್ ನ ನಾಯಕಿ ಕವಿತಾ ರೆಡ್ಡಿ ಅವರು. ಸಿಎಎ ಯನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದಂತಹ ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದ ಕವಿತಾ ರೆಡ್ಡಿ ಅವರು ಇಂತಹ ಮಾತುಗಳನ್ನು ಹೇಳಿದ್ದಾರೆ. ಈ ಹಿಂದೆ ಒಮ್ಮೆ ತೇಜಸ್ವಿ ಸೂರ್ಯ ಅವರು ಎದೆ ಬಗೆದರೆ ನಾಲ್ಕು ಅಕ್ಷರ ಇಲ್ಲದ , ಪಂಕ್ಚರ್ ಅಂಗಡಿಯಲ್ಲಿ ಕೆಲಸ ಮಾಡುವವರು ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಾರೆ ಎಂದು ಹೇಳಿದ್ದರು.

ಇಂದು ನಾವು ಭಾರತೀಯರು ಸಂಘಟನೆ ವತಿಯಿಂದ ಫ್ರೀಡಂ ಪಾರ್ಕಿನಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.‌ ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ತೀವ್ರ ಕಿಡಿಕಾರಿದ್ದಾರೆ. ಅವರು ಮಾತನಾಡುತ್ತಾ ಸಂಸದ ತೇಜಸ್ವಿ ಸೂರ್ಯ ಚಿಕ್ಕ ವಯಸ್ಸಿಗೆ ಸಂಸದರಾದವರು. ಅವರು ಮಾತನಾಡುವಾಗ ತಮ್ಮ ಮಾತಿನ ಮೇಲೆ ನಿಗಾ ಇಟ್ಟು ಮಾತನಾಡಬೇಕು ಎಂದು ತಮ್ಮ ಆಕ್ರೋಶ, ಅಸಮಾಧನವನ್ನು ಹೊರಹಾಕಿದ್ದರು. ಅವರು ಈ ಆಕ್ರೋಶಕ್ಕೆ ಕಾರಣ, ತೇಜಸ್ವಿ ಸೂರ್ಯ ಅವರು ಈ ಹಿಂದೆ ನೀಡಿದ ಹೇಳಿಕೆ.

ಆಗಲೂ ಕೂಡಾ ಆ ಹೇಳಿಕೆ ಭಾರೀ ವಿವಾದವನ್ನು ಹುಟ್ಟು ಹಾಕಿ, ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಸಿಎಎ, ಎನ್.ಪಿ.ಆರ್. ಮತ್ತು ಎನ್.ಆರ್.ಸಿ ಯನ್ನು ವಿರೋಧಿಸಿ ಇಂದು ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹವನ್ನು ನಡೆಸಲಾಗಿದ್ದು, ಇದೇ ಸಂದರ್ಭದಲ್ಲಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ಕೂಡಾ ಆರಂಭ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನ ನಾಯಕಿ ಕವಿತಾ ರೆಡ್ಡಿ ಅವರು ತೇಜಸ್ವಿ ಸೂರ್ಯ ಅವರ ಬಗ್ಗೆ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here