ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಎಚ್ಚರಿಕೆಯ ಸಂದೇಶವೊಂದನ್ನು ತಮ್ಮ ಹೇಳಿಕೆಯಲ್ಲಿ ರವಾನೆ ಮಾಡಿದ್ದಾರೆ. ಅವರು ಮಾತನಾಡುತ್ತಾ ದೇಶದಲ್ಲಿ ಬಹುಸಂಖ್ಯಾತ ಸಮುದಾಯದವರು ಜಾಗೃತವಾಗದೇ ಹೋದರೆ ಮೊಘಲ್ ಆಳ್ವಿಕೆ ಮರಳುವುದು ದೂರವಿಲ್ಲ ಎಂದು ಹೇಳಿದ್ದಾರೆ. ತೇಜಸ್ವಿ ಸೂರ್ಯ ಅವರು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಬುಧವಾರ ಮಾತನಾಡಿದ ತೇಜಸ್ವಿ ಸೂರ್ಯ ಅವರು ಆ ಸಂದರ್ಭದಲ್ಲಿ ತಮ್ಮ ಮಾತುಗಳಲ್ಲಿ ಈ ಮೇಲಿನಂತೆ ಹೇಳಿದ್ದಾರೆ.

ದೆಹಲಿಯ ಶಾಹೀನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ತೇಜಸ್ವಿ ಸೂರ್ಯ ಅವರು ಈ ಮಾತುಗಳನ್ನು ಹೇಳಿದ್ದಾರೆ. ತೇಜಸ್ವಿ ಸೂರ್ಯ ಅವರು ಈ ಮಾತನ್ನು ಹೇಳಿದ ಕೂಡಲೇ ವಿರೋಧ ಪಕ್ಷಗಳವರು ಅವರ ಮಾತಿಗೆ ತೀವ್ರ ವಿರೋಧವನ್ನು, ಆಕ್ಷೇಪವನ್ನು ಹೊರಹಾಕಿ, ತೇಜಸ್ವಿ ಸೂರ್ಯ ಅವರು ನೀಡಿರುವ ಹೇಳಿಕೆಯನ್ನು ಖಂಡನೆ ಮಾಡಿದ್ದರು. ತೇಜಸ್ವಿ ಅವರ ಮಾತುಗಳಿಗೆ ತೀವ್ರ ವಿರೋಧ ವ್ಯಕ್ತವಾಯಿತು.

ಇದೇ ಸಂದರ್ಭದಲ್ಲಿ ಅವರು ಮೋದಿ ಅವರ ಆಡಳಿತಾವಧಿಯಲ್ಲಿ ಬಿಜೆಪಿ ಸರ್ಕಾರವು ದಶಕಗಳಿಂದ ಬಗೆಹರಿಯದ ರಾಮಮಂದಿರ, ಪರಿಚ್ಛೇದ 370, ತ್ರಿವಳಿ ತಲಾಖ್ , ಬೋಡೋ ವಿವಾದ ಮುಂತಾದುವುಗಳು ಈಗಾಗಲೇ ಇತ್ಯರ್ಥವಾಗಿದೆ ಎಂದು ಹೇಳುವ ಮೂಲಕ ಬಿಜೆಪಿ ಸರ್ಕಾರದ ಸಾಧನೆಗಳನ್ನು ಬಣ್ಣಿಸಿ ಹೊಗಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here