ಪ್ರತಿ ವರ್ಷ ಜನವರಿ 26 ರ ಗಣರಾಜ್ಯೋತ್ಸವಕ್ಕೆ ಅತಿಥಿಯಾಗಿ ಭಾರತಕ್ಕೆ ಯಾರು ಆಗಮಿಸುವರು ಎಂಬ ಕುತೂಹಲವು ಇದ್ದೇ ಇರುತ್ತದೆ. ಈ ಬಾರಿಯ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯವರಿಗೆ ಆಹ್ವಾನವನ್ನು ನೀಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನವನ್ನು ಮನ್ನಿಸಿ ಒಪ್ಪಿಗೆ ನೀಡಿದ್ದಾರೆ ಆ ವಿಶೇಷ ಅತಿಥಿ. ಹಾಗಾದರೆ ಈ ಬಾರಿಯ ಗಣರಾಜ್ಯೋತ್ಸವ ಸಮಾರಂಭಕ್ಕೆ ಅತಿಥಿಯಾಗಿ ಆಗಮಿಸುತ್ತಿರುವವರು ಬ್ರೆಜಿಲ್ ನ ಅಧ್ಯಕ್ಷ ಜೈರ್ ಬೋಲ್ಸನಾರೊ. ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಆಹ್ವಾನವನ್ನು ಬ್ರೆಜಿಲ್ ಅಧ್ಯಕ್ಷರಾದ ಜೈರ್ ಬೋಲ್ಸನಾರೋ ಅವರು ನಿನ್ನೆ ಅಂದರೆ ಬುಧವಾರ ಸ್ವೀಕರಿಸಿದ್ದು, ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಕೊಂಡಿದ್ದಾರೆ.

ಜಾಗತಿಕ ಮಟ್ಟದಲ್ಲಿ ಸಮಸ್ಯೆಯಾಗಿರುವ ಭಯೋತ್ಪಾದನೆಯ ನಿಗ್ರಹಕ್ಕೆ ಸಹಕಾರ ನೀಡುವುದಕ್ಕಾಗಿ ಯಾಂತ್ರಿಕ ವ್ಯವಸ್ಥೆ ನಿರ್ಮಿಸುವ ಹಾಗೂ ವಿಶ್ವದ ಐದು ಪ್ರಮುಖ ಆರ್ಥಿಕತೆಯೊಂದಿಗೆ ಭಾರತದ ಸಂಬಂಧವನ್ನು ಬಲಪಡಿಸುವ 11ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾಗಿದ್ದರು. ಅಲ್ಲದೆ ಸಭೆಯ ಸಂದರ್ಭದಲ್ಲಿ ಬಿಡುವಿನ ವೇಳೆಯಲ್ಲಿ ಕೂಡಾ ಪ್ರಧಾನಿಯವರು, ಬೋಲ್ಸನಾರೊ ಅವರನ್ನು ಭೇಟಿಯಾಗಿ, ಉಭಯ ರಾಷ್ಟ್ರಗಳ ಕುರಿತಾದ ಮಾತುಕತೆ ನಡೆಸಿದ್ದರು.

ಮಾತುಕತೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾರತದಲ್ಲಿ ಭಯೋತ್ಪಾದನೆ ನಿಗ್ರಹಕ್ಕೆ ಮತ್ತು ಸಾರ್ವಜನಿಕರ ಹಿತದೃಷ್ಟಿಯನ್ನು ಕಾಯ್ದುಕೊಳ್ಳಲು ತಮಗೆ ಸಹಕಾರ ನೀಡಬೇಕೆಂದು ಬ್ರೆಜಿಲ್ ನ ಅಧ್ಯಕ್ಷರ ಬಳಿ ಮನವಿ ಮಾಡಿದ್ದರು. ಇದೇ ಸಂದರ್ಭದಲ್ಲಿ ಅವರು ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿ ಪಡಿಸುವ ವಿಷಯದ ಕಡೆ ಕೂಡಾ ಗಮನ ವಹಿಸಿದ್ದರು. ಇದೇ ಹಿನ್ನೆಲೆಯಲ್ಲಿ ಪ್ರಧಾನಿಯವರು ಬೊಲ್ಸನಾರೋ ಅವರನ್ನು ಗಣರಾಜ್ಯೋತ್ಸವ ಸಮಾರಂಭಕ್ಕೆ ಆಹ್ವಾನ ನೀಡಿದ್ದು, ಅದಕ್ಕೆ ಬ್ರೆಜಿಲ್ ಅಧ್ಯಕ್ಷರು ಕೂಡಾ ಆತ್ಮೀಯವಾಗಿ ಒಪ್ಪಿಗೆ ನೀಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here