ಟಿಕ್ ಟಾಕ್ ಬಂದ ನಂತರ ಇಷ್ಟ ಬಂದ ಹಾಗೆ ವೀಡಿಯೋ ಮಾಡಿ ವೈರಲ್ ಮಾಡುವುದು ಇಂದಿನ ಯುವಜನತೆಯ ವಾಡಿಕೆಯಾಗಿಬಿಟ್ಟಿದೆ. ಇದೀಗ ಅಂತದ್ದೇ ಒಂದು ವೀಡಿಯೊ ಈಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತ ವಾಂತಿ ಮಾಡುವಂತೆ ನಟಿಸುತ್ತಿದ್ದನು.

ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿ ನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ.ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದು ಕುಳಿತಿದ್ದಾನೆ. ಮಗನ ಆಟಕ್ಕೆ ತಾಯಿ ಎದೆ ಬಡಿತವೇ ನಿಂತಾಂತಗಿ ಭಯಗೊಂಡಿದ್ದರು.

ಮಗ ಟಿಕ್ ಟಾಕ್ ಮಾಡುತ್ತಿರುವ ವಿಷಯ ತಿಳಿದ ತಾಯಿ ಮಗನಿಗೆ ಸರಿಯಾಗಿ ಹೊಡೆದಿದ್ದಾರೆ. ಅಲ್ಲದೆ ಭಯದಿಂದ ಜೋರಾಗಿ ಅಳುತ್ತಾ ಮಗನಿಗೆ ಬೈದಿದ್ದಾರೆ. ತಾಯಿ ಬೈಯುವಾಗ ಯುವಕ ನಗುತ್ತಾ ಚೆಲ್ಲಿರುವ ಸಾಸ್ ಕ್ಲೀನ್ ಮಾಡಿದ್ದಾನೆ.ಯುವಕನ ಟಿಕ್ ಟಾಕ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯುವಕನ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here