Kannada

ಡಾ.ಸರೋಜಿನಿ ಮಹಿಷಿ ವರದಿ ಜಾರಿ ಮಾಡಿ ಕನ್ನಡಿಗರ ಹಿತ ಕಾಪಾಡಬೇಕು ಎಂದು ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಇಂದು (ಗುರುವಾರ) ಕರ್ನಾಟಕ ಬಂದ್‌ಗೆ ಕರೆ ನೀಡಿವೆ.ಹಲವು ಕನ್ನಡ ಸಂಘಟನೆಗಳು, ಆಟೋ ಚಾಲಕರ ಸಂಘಟನೆಗಳು, ಓಲಾ, ಊಬರ್ ಚಾಲಕರು, ಕೆಲ ಕಾರ್ಮಿಕ ಸಂಘಟನೆಗಳು ಈ ಬಂದ್‌ಗೆ ಬೆಂಬಲ ನೀಡಿವೆ. ಆದರೆ, ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ನಮ್ಮ ಮೆಟ್ರೋ, ಹೋಟೆಲ್ ಸಂಘಟನೆಗಳು, ಔಷಧಿ ಅಂಗಡಿಗಳ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿಲ್ಲ.

ಹುಬ್ಬಳ್ಳಿ, ಬೆಳಗಾವಿ, ಮಂಗಳೂರು ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ಹಲವು ಸಂಘಟನೆಗಳು ಹೇಳಿವೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸೇರಿದಂತೆ ಇನ್ನೂ ಕೆಲವು ಸಂಘಟನೆಗಳು ನೈತಿಕ ಬೆಂಬಲವನ್ನಷ್ಟೆ ಘೋಷಿಸಿವೆ.ಮಹಿಷಿ ವರದಿ ಜಾರಿ ಬಗ್ಗೆ ನನ್ನ ಬಳಿ ಬಂದು ನೇರವಾಗಿ ಮಾತನಾಡಿ, ಬಂದ್ ಮಾಡುವುದರಿಂದ ಏನೂ ಪ್ರಯೋಜನ ಇಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಂದ್ ಕೈ ಬಿಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕನ್ನಡ ಸಂಘಟನೆಗಳು, ಆಟೋ ಚಾಲಕರು ಹಾಗೂ ಓಲಾ, ಊಬರ್ ಕ್ಯಾಬ್‌ಗಳ ಚಾಲಕರು ಬಂದ್‌ ಆಚರಿಸುತ್ತಿರುವುದರಿಂದ ಬೆಂಗಳೂರಿಗೆ ಬಂದ್ ಬಿಸಿ ಹೆಚ್ಚು ತಟ್ಟಲಿದೆ. ಏತನ್ಮದ್ಯೆ ಬಲವಂತವಾಗಿ ಬಂದ್ ಮಾಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಎರಡು ಸಂಘಟೆನಗಳಿಗೆ ಮಾತ್ರ ಪೊಲೀಸರು ಶಾಂತಿಯುತ ಮೆರವಣಿಗೆ ನಡೆಸಲು ಅವಕಾಶ ನಿಡಿದ್ದಾರೆ. ಅಂಬೇಡ್ಕರ್ ಸೇನೆ ಹಾಗೂ ಕನ್ನಡ ಸಂಘಟನೆಗಳ ಒಕ್ಕೂಟ ಎನ್ನುವ ಸಂಘಟನೆಗೆ ಮಾತ್ರ ಸಿಟಿ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆಸಲು ಬೆಂಗಳೂರು ಪೊಲೀಸರು ಅನುಮತಿ ನೀಡಿದ್ದಾರೆ

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here