ಅಯೋಧ್ಯೆಯ ವಿವಾದಿತ ಭೂಮಿ, ರಾಜ್ಯದ ಅನರ್ಹ ಶಾಸಕರ ಪ್ರಕರಣದ ನಂತರ ಇದೀಗ ಸುಪ್ರೀಂ ಕೋರ್ಟ್ ಮತ್ತೊಂದು ಸೂಕ್ಷ್ಮ ಹಾಗೂ ಧಾರ್ಮಿಕ ನಂಬಿಕೆಗಳ ವಿಚಾರವಾದ ಪ್ರಕರಣದ ತೀರ್ಪನ್ನು ಇಂದು ನೀಡಲಿದೆ‌. ಸುಪ್ರೀಂಕೋರ್ಟಿನಲ್ಲಿ ಇಂದು ಬಹಳಷ್ಟು ಮಹತ್ವ ಪಡೆದಿರುವ, ಜನರ ನಂಬಿಕೆ ಹಾಗೂ ಭಾವನಾತ್ಮಕ ವಿಷಯವಾದ ಶಬರಿಮಲೈ ಅಯ್ಯಪ್ಪನ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಕೇಸ್ ಗೆ ಇಂದು ತೀರ್ಪು ಹೊರಬರಲಿದೆ. ಇದಕ್ಕಾಗಿ ದೇಶದ ಜನತೆ ಬಹುದಿನಗಳಿಂದ ಕಾಯುತ್ತಿದ್ದು, ಇಂದು ಬೆಳಗ್ಗೆ 10.30ಕ್ಕೆ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಕಟಿಸಲಿದೆ.

ಶಬರಿಮಲೆ ಅಯ್ಯಪ್ಪನ ಸನ್ನಿಧಾನಕ್ಕೆ ಮಹಿಳೆಯರ ಪ್ರವೇಶ ಪ್ರಶ್ನಿಸಿ ಸಲ್ಲಿಸಲಾದ 64 ಮರುಪರಿಶೀಲನಾ ಅರ್ಜಿಗಳ ಸಂಬಂಧ ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಲಿದಿ. ಈ ವಿಚಾರದಲ್ಲಿ ಫೆಬ್ರವರಿ 6 ಕ್ಕೆ ವಿಚಾರಣೆ ಮುಗಿಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ನೇತೃತ್ವದ ಸಾಂವಿಧಾನಿಕ ಪೀಠ ತೀರ್ಪನ್ನು ಕಾಯ್ದಿರಿಸಿತ್ತು. ಕಳೆದ 2018 ರ ಸೆಪ್ಟೆಂಬರ್ 28 ರಂದು ಇದೇ ಕೇಸ್ ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಅಂದಿನ ಸಿಜೆ ದೀಪಕ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠ 4:1ರ ಅನುಪಾತದಲ್ಲಿ ಎಲ್ಲಾ ವಯೋಮಾನದ ಮಳೆಯರಿಗೆ ಅಯ್ಯಪ್ಪ ದೇಗುಲದ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು.

ಆದರೆ ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ, ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳು ಕೇರಳದಲ್ಲಿ ಲ ಪ್ರತಿಭಟನೆ ನಡೆಸಿತ್ತು. ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಕನಕದುರ್ಗಾ ಮತ್ತು ಬಿಂದು ಅಮ್ಮಿಣಿ ಎಂಬ ಮಹಿಳೆಯರು ಪೊಲೀಸ್ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ ಪಡೆದು, ಅದರಿಂದ ಪರಿಸ್ಥಿತಿ ಮತ್ತಷ್ಟು ಉದ್ರಿಕ್ತವಾಗಿತ್ತು. ತದ ನಂತರ ಹೀಗಾಗಿ, ನಾಯರ್ ಸಮಾಜ, ತಿರುವಾಂಕೂರು ದೇವಸ್ವ ಮಂಡಳಿ ಹಾಗೂ ಕೇರಳ ಸರ್ಕಾರದ ಜೊತೆಗೆ 64 ಅರ್ಜಿಗಳು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಇಂದು ತೀರ್ಪು ಹೊರಬೀಳಲಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here