ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿಖಿಲ್ ಅವರ ಬಗ್ಗೆ, ಕುಮಾರಸ್ವಾಮಿ, ದೇವೇಗೌಡ ಸೇರಿದಂತೆ ಜೆಡಿಎಸ್ ಮುಖಂಡರ ಬಗ್ಗೆ ಸಿಕ್ಕಾಪಟ್ಟೆ  ಟ್ರೋಲ್ ಮಾಡಿದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಕುಟುಂಬದ ವಿರುದ್ಧ ‘ಟ್ರೋಲ್‍ ಮಗ’ ಪೇಜ್ ನಿಂದ ಟ್ರೋಲ್ ಮಾಡಲಾಗಿತ್ತು. ಅದು ಸಿಕ್ಕಾಪಟ್ಟೆ ವೈರಲ್ ಆದ ಹಿನ್ನೆಲೆಯಲ್ಲಿ ‘ಟ್ರೋಲ್‍ ಮಗ’ ಪೇಜ್‍ ಅಡ್ಮಿನ್ ಆಗಿರುವ ಎಸ್‍. ಜಯಕಾಂತ್ ಎಂಬುವರ ವಿರುದ್ಧ ಎಫ್ ಐಆರ್ ದಾಖಲಿಸಿ, ಅವರನ್ನು ಬಂಧನಕ್ಕೆ ಒಳಪಡಿಸಲಾಗಿತ್ತು.

ಹೈಕೋರ್ಟ್ ಜಯಕಾಂತ್ ಮೇಲೆ ದಾಖಲಿಸಲಾಗಿದ್ದ ಎಫ್ ಐಆರ್ ಅನ್ನು ರದ್ದುಗೊಳಿಸಿದೆ. ಈ ಮೂಲಕ ಕರ್ನಾಟಕ ಹೈಕೋರ್ಟ್ ಇಂದು ಒಂದು ಮಹತ್ವದ ಆದೇಶವನ್ನು ಹೊರಡಿಸಿದೆ. ಅದು ಮಾತ್ರವಲ್ಲದೆ ಈ ಪ್ರಕರಣದ ತನಿಖೆಯಲ್ಲಿ ಭಾಗಿಯಾಗಿದ್ದ ಪೊಲೀಸರನ್ನು ಕೂಡಾ ತನಿಖೆಗೊಳಪಡಿಸಿ‌ ಎಂದು ಕೋರ್ಟ್ ಆದೇಶವನ್ನು ನೀಡಿದೆ. ಇದೇ ಸಂದರ್ಭದಲ್ಲಿ ಮ್ಯಾಜಿಸ್ಟ್ರೇಟ್ ಮೇಲೆಯೂ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜೆನರಲ್‌ ಅವರಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದೆ.

ಇಷ್ಟು ಮಾತ್ರವಲ್ಲದೆ ಫೇಸ್ ಬುಕ್ ಪೇಜ್ ಅಡ್ಮಿನ್‌ನನ್ನು ಅಕ್ರಮವಾಗಿ ಬಂಧನದಲ್ಲಿ ಇಟ್ಟುಕೊಂಡಿರುವಿರಾ? ಎಂದು ಪ್ರಶ್ನೆ ಮಾಡಿರುವ ಕೋರ್ಟ್ ಹಾಗೇನಾದರೂ ಇದ್ದರೆ ಕೂಡಲೇ 1 ಲಕ್ಷ ರೂಪಾಯಿ ದಂಡ ಪಾವತಿಸಲು ಆದೇಶ ಹೊರಡಿಸಿದ್ದು, ಈ ಪ್ರಕರಣದ ತನಿಖೆಯಲ್ಲಿ ತೊಡಗಿಸಿಕೊಂಡಿದ್ದ ಅಧಿಕಾರಿಗಳ ಬಳಿ ದಂಡ ವಸೂಲಿ ಮಾಡಬೇಕೆಂಬ ಸೂಚನೆಯನ್ನು ನ್ಯಾ.‌ಫಣೀಂದ್ರರ ಅವರ ಏಕಸದಸ್ಯ ಪೀಠ ಸೂಚಿಸಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here