ಕರ್ನಾಟಕ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಗೆ ಭಾರೀ ಹಿನ್ನಡೆಯಾಗಲಿದೆ. ಪಕ್ಷವೇ ನಡೆಸಿರುವ ಸಮೀಕ್ಷೆ ಪ್ರಕಾರ ಉಪ ಚುನಾವಣೆಯಲ್ಲಿ ಗೆಲ್ಲುವುದು 3 ರಿಂದ 4 ಕ್ಷೇತ್ರಗಳನ್ನು ಮಾತ್ರ. ಸಮೀಕ್ಷೆಯ ವರದಿ ನೋಡಿ ಸಿಎಂ ಯಡಿಯೂರಪ್ಪ ಕಂಗಾಲಾಗಿದ್ದಾರೆ.17 ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿದ್ದಾರೆ. ಈ ಪೈಕಿ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಕರ್ನಾಟಕದ ಬಿಜೆಪಿ ಸರ್ಕಾರದ ಪಾಲಿಗೆ ಉಪ ಚುನಾವಣೆ ಮಹತ್ವದ್ದಾಗಿದೆ. ಸರ್ಕಾರವನ್ನು ಉಳಿಸಿಕೊಳ್ಳಲು ಕನಿಷ್ಠ 6 ಸ್ಥಾನ ಗೆಲ್ಲಬೇಕಿದೆ.

ಅನರ್ಹಗೊಂಡಿರುವ ಶಾಸಕರ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇದೆ. ಸ್ಪೀಕರ್ ಆದೇಶವನ್ನು ನ್ಯಾಯಾಲಯ ಎತ್ತಿ ಹಿಡಿದರೆ ಅನರ್ಹ ಶಾಸಕರಿಗೆ ಸಂಕಷ್ಟ ಎದುರಾಗಲಿದ್ದು, ಉಪ ಚುನಾವಣೆ ಎದುರಿಸಬೇಕಾಗಿದೆ.
ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಉಪ ಚುನಾವಣೆ ಸಿದ್ಧತೆಯನ್ನು ಆರಂಭಿಸಿವೆ. ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ.

ಒಂದು ವೇಳೆ ಈ ಸಮೀಕ್ಷೆ ನಿಜವಾದರೆ ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಅಧಿಕಾರ ಕಳೆದುಕೊಳ್ಳುವ ಸಂಭವವಿದೆ. ಅಷ್ಟೇ ಅಲ್ಲದೆ ಯಡಿಯೂರಪ್ಪ ಅವರ ಮೇಲೆ ಒತ್ತಡಗಳು ಸಹ ಹೆಚ್ಚಾಗಲಿದ್ದು ಯಡಿಯೂರಪ್ಪ ಅಧಿಕಾರ ಬಿಡಬೇಕಾದ ಸಂದರ್ಭ ಬರಲಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here