ರಾಜ್ಯದ ಮೈತ್ರಿ ಸರ್ಕಾರದಲ್ಲಿ ಇಂದು ಒಂದು ಹೈಡ್ರಾಮಾ ನಡೆದಿದೆ. ಇಂದು ಒಂದೇ ದಿನ 12 ಜನ ಶಾಸಕರುಗಳು ರಾಜೀನಾಮೆ ನೀಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾದ್ಯಮಗಳಲ್ಲಿ ಚರ್ಚೆಗಳು ನಡೆಯುತ್ತಿದೆ. ಶಾಸಕರು ತಮ್ಮ ತಮ್ಮ ಹೇಳಿಕೆಗಳನ್ನು ಕೂಡಾ‌‌ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ 12 ಶಾಸಕರ ರಾಜೀನಾಮೆ ಬಗ್ಗೆ ಮಾಧ್ಯಮಗಳು ಕೇಳಿದಂತಹ ಪ್ರಶ್ನೆಗೆ ನಗರಾಭಿವೃದ್ದಿ ಸಚಿವರಾದ ಯು.ಟಿ.ಖಾದರ್ ಅವರು ತಮ್ಮ ಅಭಿಪ್ರಾಯವನ್ನು ನೀಡಿದ್ದು, ಅವರು ಈ ರಾಜೀನಾಮೆ‌ ಪರ್ವವನ್ನು ಪ್ರಜಾಪ್ರಭುತ್ವದ ಸೌಂದರ್ಯವೆಂದು ಕರೆದಿದ್ದು ಎಲ್ಲರ ಗಮನವನ್ನು ಸೆಳೆದಿದೆ.

ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವ ವಿಚಾರಕ್ಕೆ ಅವರು ಎಂಬ ಈ ರೀತಿಯ ಕೆಲವು ವಿಚಾರಗಳು ಬರುತ್ತವೆ ಎಂದು ಹೇಳುತ್ತಾ ಇವೆಲ್ಲಾ ಬ್ಯೂಟಿ ಆಫ್ ಡೆಮಾಕ್ರಸಿ ಎಂದು ಕರೆಯುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ.
ಯ.ಟಿ. ಖಾದರ್ ಅವರು ಮಾತನಾಡುತ್ತಾ‌ ಈಗ ಶಾಸಕರು ರಾಜೀನಾಮೆ ನೀಡುವುದರಿಂದ ರಾಜ್ಯದಲ್ಲಿ ಈಗ ಅಸ್ತಿತ್ವದಲ್ಲಿರುವ ಸರ್ಕಾರಕ್ಕೆ ಯಾವುದೇ ರೀತಿಯ ಅಪಾಯವಿಲ್ಲ ಎಂದು ಹೇಳುತ್ತಾ,
ಮೈತ್ರಿ ಸರ್ಕಾರ ರಾಜ್ಯದಲ್ಲಿ ಮುಂದುವರಿಯುತ್ತದೆ ಎಂದು ನಂಬಿಕೆಯ ಮಾತನಾಡಿದ್ದಾರೆ.

ಇದಲ್ಲದೆ ಖಾದರ್ ಅವರ ಬಳಿ ಮಾದ್ಯಮಗಳು ರಾಜೀನಾಮೆ ಕೊಟ್ಟಿರುವ ಬಹುತೇಕ ಶಾಸಕರು ಸಿದ್ದರಾಮಯ್ಯನವರ ಬೆಂಬಲಿಗರಾಗಿದ್ದೇರೆ ಎಂಬ ಮಾತನ್ನು ಕೇಳಿದಾಗ, ಅವರು ಅದಕ್ಕೆ ಬಹಳ ಜಾಣತನದಿಂದ ಉತ್ತರ ನೀಡಿದ್ದು, ಕಾಂಗ್ರೆಸ್ಸಿನ ಎಲ್ಲಾ ಶಾಸಕರಿಗೂ ಸಿದ್ದರಾಮಯ್ಯನವರೇ ನಾಯಕರು ಎಂದು ಹೇಳಿದ್ದಾರೆ. ಮೈತ್ರಿ ಸರ್ಕಾರ ಮುಂದುವರೆಯುವುದು ಎಂಬ ಖಾದರ್ ಅವರ ಭರವಸೆ ಏನಾಗಲಿದೆ ಎಂಬುದಕ್ಕೆ ಸದ್ಯಕ್ಕಂತೂ ಉತ್ತರವಿಲ್ಲ…

 

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here