ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೈಗೊಂಡ ಕೆಲವು ಕ್ರಮಗಳಲ್ಲಿ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿರುವುದು ಕೂಡಾ ಒಂದು. ಆದರೆ ಸರ್ಕಾರದ ಈ ಕ್ರಮವನ್ನು ಖಂಡಿಸಿ ರಾಮನಗರದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ವಾಟಾಳ್ ನಾಗರಾಜ್ ಅವರು ಮಾತನಾಡುತ್ತಾ ಟಿಪ್ಪುವಿನ ಧೈರ್ಯ ಸಾಹಸಗಳ ಬಗ್ಗೆ ಹೇಳಿದ್ದಾರೆ ಅಲ್ಲದೆ ಸರ್ಕಾರದ ತೆಗೆದುಕೊಂಡಿರುವ ಕ್ರಮದ ಬಗ್ಗೆ ತಮ್ಮ ಅಸಮಾಧಾನವನ್ನು ಅವರು ಹೊರ ಹಾಕಿದ್ದಾರೆ.

ರಾಮನಗರದ ಐಜೂರು ವೃತ್ತದ ಬಳಿಯಲ್ಲಿರುವ ಕೆ.ಎಸ್‍.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಪ್ಪು‌ ಬಾವುಟವನ್ನು ಪ್ರದರ್ಶಿಸಲಾಯಿತು. ಆ ಮೂಲಕ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿತ್ತಾ. ವಾಟಾಳ್ ನಾಗರಾಜ್ ಅವರು ಮಾತನಾಡಿದರು. ಅವರು ತಮ್ಮ ಮಾತುಗಳಲ್ಲಿ ಟಿಪ್ಪು ಸುಲ್ತಾನ್ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿರುವ ನಾಯಕನಲ್ಲ ಎಂದು ಹೇಳಿದ್ದಾರೆ. ಆತನೊಬ್ಬ ದೇಶಪ್ರೇಮಿ, ಹಾಗೂ ತನ್ನ ದೇಶಕ್ಕಾಗಿ ತನ್ನಿಬ್ಬರು ಮಕ್ಕಳನ್ನೇ ಒತ್ತೆ ಇಟ್ಟು ಹೋರಾಟ ಮಾಡಿದ ನಾಯಕ ಎಂದು ಹೊಗಳಿದ್ದಾರೆ.

ಆದರೆ ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿದರೆ ರಾಜ್ಯದಲ್ಲಿ ಕೋಮುಗಲಭೆ ಉಂಟಾಗುತ್ತದೆ ಎಂಬ ಕಾರಣ ನೀಡಿ ಅದನ್ನು ರದ್ದು ಮಾಡಿರುವುದು ಸರಿಯಲ್ಲ , ಕೂಡಲೇ ಟಿಪ್ಪು ಜಯಂತಿ ರದ್ದತಿಯ ಆದೇಶವನ್ನು ಸರ್ಕಾರ ವಾಪಸ್ ಪಡೆದು, ಸರ್ಕಾರದ ವತಿಯಿಂದಲೇ ಟಿಪ್ಪು ಜನ್ಮ ದಿನಾಚರಣೆಯನ್ನು ಆಚರಿಸಬೇಕೆಂದು ಸಲಹೆ ನೀಡಿದ್ದಾರೆ. ಹಾಗೇನಾದರೂ ಆಗದಿದ್ದರೆ ಇಡೀ ರಾಜ್ಯದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಅವರು ಇದೇ ಭಾನುವಾರ ಟಿಪ್ಪು ಸಮಾಧಿ ಬಳಿ ವಿಶೇಷ ಕಾರ್ಯಕ್ರಮವನ್ನು ನಡೆಸುವುದಾಗಿ ಕೂಡಾ ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here