ಕನ್ನಡ ಚಿತ್ರರಂಗದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಸುತ್ತಿರುವ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು ಅವರು ಕೊರೋನ  ಪರಿಹಾರ ನಿಧಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರಿಗೆ 10 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹತ್ತು ಲಕ್ಷ ನೆರವು ನೀಡಿದ್ದರ ಕುರಿತು ಮಧ್ಯಮವು ವಿಜಯ್ ಪ್ರಕಾಶ್ ಅವರನ್ನು ಸಂಪರ್ಕಿಸಿದಾಗ ವಿಜಯ್ ಪ್ರಕಾಶ್ ಈ ರೀತಿ ಹೇಳಿದರು.

“ಕೆರೆಯ ನೀರನು ಕೆರೆಗೆ ಚೆಲ್ಲಿ ವರವ ಪಡೆದವರಂತೆ ಕಾಣಿರೋ ಅಂತ ಪುರಂದರ ದಾಸರು ಹೇಳಿರುವಂತ ಮಾತು, ನನ್ನ ಜೀವನದಲ್ಲಿ ಸಮಸ್ತ ಕನ್ನಡ ಜನತೆ ಆ ಪ್ರೀತಿಯ ಬೊಗಸೆಯನ್ನ ತುಂಬಿಸಿ ಕೊಟ್ಟಿದ್ದಾರೆ. ಆ ಬೊಗಸೆಯಿಂದ ಒಂದು ಚಿಕ್ಕ ಕಾಣಿಕೆ ಜನರಿಗಾಗಿ ಮಾಡೋದು ನನ್ನ ಸೌಭಾಗ್ಯ, ನನ್ನ ಕರ್ತವ್ಯ, ಇದು ಭಗವಂತನ ಕೃಪೆ ಎಂದು ಭಾವಿಸುತ್ತೇನೆ.

ಕರೋನಾ ಮಹಾಮಾರಿಯನ್ನ ನಾವೆಲ್ಲರೂ ಮನೆಯೊಳಗಿದ್ದು ಎದುರಿಸುತ್ತಿದ್ದರೆ, ಹೊರಗಡೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳು, ನಮ್ಮ ಸರ್ಕಾರದ ಎಲ್ಲ ಅಧಿಕಾರಿಗಳು, ಡಾಕ್ಟರ್ಸ್ ಹಾಗೂ ಅವರ ತಂಡ, ಪೊಲೀಸರು ಹೀಗೆ ಹಗಲು ರಾತ್ರಿ ನಮ್ಮನ್ನ ಈ ಒಂದು ಮಹಾಮಾರಿಯಿಂದ ರಕ್ಷಿಸಲು ಕೆಲಸ ಮಾಡ್ತಾ ಇದ್ದಾರೆ. ಇಂಥ ಒಂದು ಸಂದರ್ಭದಲ್ಲಿ ನಾವೆಲ್ಲರೂ ನಮ್ಮ ಕೈಯಲ್ಲಿ ಆದಷ್ಟು ಪರಿಹಾರ ನಿಧಿಗೆ ಕೊಟ್ಟರೆ ಅದು ಎಲ್ಲಿಯೋ ಯಾರೋ ಒಬ್ಬರ ಪ್ರಾಣವನ್ನ ಉಳಿಸಲು ಅನುಕೂಲವಾಗಬಹುದು ಎಂದು ಭಾವಿಸುತ್ತೇನೆ. ಹಾಗಾಗಿ ಸಮಸ್ತ ಜನತೆಯಲ್ಲಿ ನನ್ನ ಪ್ರಾರ್ಥನೆ, ನಿಮ್ಮ ಕೈಯಲ್ಲಿ ಆದಷ್ಟು ಕೊಡುಗೆಯನ್ನ ಈ ಪರಿಹಾರ ನಿಧಿಗೆ ಮಾಡಿ. ನಿಮ್ಮಿಂದ ಯಾರೋ ಒಬ್ಬರ ಜೀವ ಉಳಿಯಲಿಕ್ಕೆ ಸಾಧ್ಯವಾಗುತ್ತೆ.

ಇಷ್ಟೇ ಅಲ್ಲದೆ ನಾನು ನಮ್ಮ ದೇಶದ ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ, ಕೆಲವು ರಾಜ್ಯಗಳ ಪರಿಹಾರ ನಿಧಿಗೆ ಕೂಡ ಒಂದು ಅಳಿಲು ದೇಣಿಗೆಯನ್ನ ನೀಡಿದ್ದೇನೆ. ಇಂಥ ಸಮಯದಲ್ಲಿ ನಾವೆಲ್ಲರೂ ಕೈಜೋಡಿಸಿ ನಿಂತರೆ, ಖಂಡಿತವಾಗಿಯೂ ಈ ಕರೋನಾ ಅನ್ನುವ ಮಹಾಮಾರಿಯನ್ನ ಗೆದ್ದು ಮೊದಲಿನಂತೆಯೇ ಸಮಾಜದಲ್ಲಿ ಸುಖವಾಗಿ, ಸಂತೋಷವಾಗಿ ಬದುಕುತ್ತೇವೆ ಅನ್ನುವ ಭರವಸೆ ನನಗಿದೆ. ಲೋಕಾ ಸಮಸ್ತಾ ಸುಖಿನೋ ಭವಂತು ಎಂದು ಗಾಯಕ ವಿಜಯ್ ಪ್ರಕಾಶ್ ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here