ನವರಾತ್ರಿಯ ಉದ್ದಿಶ್ಯವನ್ನು ಸರಿಯಾಗಿ ಅರ್ಥೈಸಿಕೊಂಡು, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ್ದಾರೆ. ದ್ವಾರಕಾ ಶ್ರೀರಾಂ ಲೀಲಾ ಸೊಸೈಟಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಡೆದ ರಾವಣ ದಹನ ಕಾರ್ಯಕ್ರದಲ್ಲಿ ಮಾತನಾಡುತ್ತಿದ್ದ ಅವರು, ಮಹಿಳೆಯರ ಘನತೆಯನ್ನು ಕಾಪಾಡುವಂತೆ ಮನವಿ ಮಾಡಿಕೊಂಡರು.

ನಮ್ಮದು ದೇವಿಯರನ್ನು ಪೂಜಿಸುವ ಸಂಸ್ಕೃತಿ. ನವರಾತ್ರಿಯಲ್ಲಿ ದುರ್ಗೆಯನ್ನು ದೀಪಾವಳಿಯಲ್ಲಿ ಮಹಾಲಕ್ಷ್ಮಿಯನ್ನು ಪೂಜಿಸುತ್ತೇವೆ. ತಾಯಿಯನ್ನು ದೇವರ ಸಮಾನ ಎನ್ನುತ್ತೇವೆ. ಇಂಥ ಸಂಸ್ಕೃತಿಯಲ್ಲಿ ನಮ್ಮ ಹೆಣ್ಣು ಮಕ್ಕಳಿಗೆ ಗೌರವ ಕೊಡುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

 

ಇದೇ ಸಂದರ್ಭದಲ್ಲಿ ಅವರು ಆಹಾರ ನಷ್ಟ ಮಾಡದಂತೆ, ನೀರನ್ನು ಸಂರಕ್ಷಿಸುವಂತೆ, ವಿದ್ಯುತ್ತನ್ನು ಪೋಲು ಮಾಡದಂತೆ ಹಾಗೂ ಪುನರ್ಬಳಕೆ ಮಾಡಲಾಗದ ಪ್ಲಾಸ್ಟಿಕ್ ಬಳಸದಂತೆ ಕಿವಿಮಾತು ಹೇಳಿದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here