ಭಾನುವಾರ ಮುಂಜಾನೆ 5 ಗಂಟೆ ಸುಮಾರಿಗೆ ವಿಜಯವಾಡದ ಖಾಸಗಿ ಆಸ್ಪತ್ರೆಯೊಂದರ
ಕೋವಿಡ್ -19 ಆರೈಕೆ ಕೇಂದ್ರವಾಗಿ ಮಾರ್ಪಾಟು ಮಾಡಲಾಗಿದ್ದ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ, ಈ ಅಗ್ನಿ ದುರಂತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಘಟನೆಯ ಸಮಯದಲ್ಲಿ ಸುಮಾರು 50 ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಪ್ರಾಥಮಿಕ ವರದಿಗಳ ಪ್ರಕಾರ ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ನಡೆದು ಹೋದ ಅನಿರೀಕ್ಷಿತ ಅವಘಡದಲ್ಲಿ ಮೃತಪಟ್ಟವರ ಕುಟಂಬಕ್ಕೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು 50 ಲಕ್ಷ ರೂಪಾಯಿಗಳ ಪರಿಹಾರಧನವನ್ನು ಘೋಷಣೆ ಮಾಡಿದ್ದಾರೆ.

ಏಲೂರು ರಸ್ತೆಯಲ್ಲಿರುವ ಸ್ವರ್ಣ ಪ್ಯಾಲೇಸ್ ಹೋಟೆಲ್ ಅನ್ನು ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡಲು ರಮೇಶ್ ಆಸ್ಪತ್ರೆ ಗುತ್ತಿಗೆಗೆ ತೆಗೆದುಕೊಂಡಿದೆ. ಆಸ್ಪತ್ರೆಯಿಂದ ಕಳೆದ ಎರಡು ವಾರಗಳಲ್ಲಿ ಸುಮಾರು 50 ರೋಗಿಗಳನ್ನು ಪ್ಯಾಲೇಸ್ ನಲ್ಲಿ ದಾಖಲಿಸಲಾಗಿದೆ. ಘಟನೆಯ ಸಮಯದಲ್ಲಿ ಸುಮಾರು 10 ಪ್ಯಾರಾ ವೈದ್ಯಕೀಯ ಸಿಬ್ಬಂದಿ ಅವರಿಗೆ ಸಹಾಯ ಮಾಡುತ್ತಿದ್ದರು. ಬಹುತೇಕ ಸಾವುಗಳು ದಟ್ಟವಾದ ಹೊಗೆಯಿಂದ ಆಗಿದೆ ಎನ್ನಲಾಗಿದೆ. ಅಲ್ಲದೇ ಈ ವಿಚಾರವಾಗಿ ತನಿಖೆಯನ್ನು ನಡೆಸುವಂತೆ ಆದೇಶಿಸಿರುವ ಮುಖ್ಯಮಂತ್ರಿಯವರು, ಅಗ್ನಿ ದುರಂತದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೇ ನೀಡಿದ್ದಾರೆ.‌

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here