ಮಾನ್ಯ ಸಿಎಂ ಯಡಿಯೂರಪ್ಪನವರ ಪುತ್ರ ಸಂಸದ ವಿಜಯೇಂದ್ರ ಅವರು, ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತಿದೆ ನಿಮ್ಮ ಮಾತುಗಳು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ವ್ಯಂಗ್ಯವಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವರ್ಗಾವಣೆ ದಂಧೆ ಮಾಡಲು ಯಡಿಯೂರಪ್ಪ ಸ್ವತಃ ತಮ್ಮ ಸುಪುತ್ರನನ್ನೇ ಬಿಟ್ಟಿದ್ದಾರೆ ಎಂಬ ಹೇಳಿಕೆಯೊಂದನ್ನು ನೀಡಿದ ಹಿನ್ನೆಲೆಯಲ್ಲಿ ಅವರ ಮಾತಿಗೆ ತಿರುಗೇಟು ನೀಡಿದ್ದಾರೆ ಸಂಸದ ವಿಜಯೇಂದ್ರ ಅವರು. ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಕುಮಾರಸ್ವಾಮಿ ಅವರು ಹೇಳಿರುವ ಮಾತಿಗೆ ಟ್ವೀಟ್ ಮಾಡುವ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾಜಿ ಸಿಎಂ ಅವರಿಗೆ ತಿರುಗೇಟು ನೀಡುತ್ತಾ ವಿಜಯೇಂದ್ರ ಅವರು ಟ್ವಿಟರ್ ನಲ್ಲಿ ಕಮೀಷನ್ ದಂಧೆ ,ವರ್ಗಾವಣೆ ದಂಧೆ,ನೇಮಕಾತಿ ದಂಧೆಗಳ ಜನಕರು ಹಾಗೂ ಗುತ್ತಿಗೆದಾರರು ನೀವೆಂಬುದು ಇಡೀ ರಾಜ್ಯಕ್ಕೇ ತಿಳಿದಿದೆ ಕುಮಾರ ಸ್ವಾಮಿಯವರೇ, “ಕೋತಿ ತಾನು ತಿಂದು ಮೇಕೆ ಬಾಯಿಗೆವರೆಸಿ ದಂತಿದೆ“ ನಿಮ್ಮ ಮಾತುಗಳು. CBI ತನಿಖೆಗೆ ಹೆದರಿ ಹತಾಶ ಹೇಳಿಕೆ ನೀಡುತ್ತಿದ್ದೀರಿ ವಿಷಯಾಂತರಗೊಳಿಸಿ ಜನತೆಯ ಧಿಕ್ಕು ತಪ್ಪಿಸುವ ಕುತಂತ್ರದ ಮಾತು ನಿಲ್ಲಿಸಿ ಎಂದು ಹೇಳಿದ್ದಾರೆ.

ವಿಜಯೇಂದ್ರ ಅವರು ಇಂದು ಬೆಳಿಗ್ಗೆ ಟ್ವೀಟ್ ಮಾಡುವ ಮೂಲಕ ಕುಮಾರಸ್ವಾಮಿ ಅವರು ಸಿಬಿಐ ತನಿಖೆಗೆ ಹೆದರಿ ಹತಾಶರಾಗಿ ಇಂತಹ ಮಾತುಗಳನ್ನು ಹೇಳಿದ್ದಾರೆ ಎನ್ನುತ್ತಾ, ಕುತಂತ್ರದ ಮಾತನ್ನು ಆಡಬೇಡಿ ರಾಜ್ಯದ ಜನತೆಗೆ ಎಲ್ಲಾ ತಿಳಿದಿದೆ, ಅವರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡಬೇಡಿ ಎಂದು ಸಲಹೆಯನ್ನು ನೀಡುವ ಮೂಲಕ ಕೋತಿ ಹಾಗೂ ಮೇಕೆಯ ಉದಾಹರಣೆ ನೀಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here