ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಡೆದ ಗಲಭೆಯ ಸುದ್ದಿ ಈಗಾಗಲೇ ರಾಜ್ಯ ವ್ಯಾಪಿಯಾಗಿ ಹರಡಿದ್ದು, ಈ ಪ್ರಕರಣದ ಕುರಿತು ಎಲ್ಲೆಡೆ ದೊಡ್ಡ ಮಟ್ಟದ ಆಕ್ರೋಶ ಹಾಗೂ ಅಸಮಾಧಾನಗಳು ಕೇಳಿ ಬರುತ್ತಿದೆ. ಈ ವಿಷಯವಾಗಿ ಕಾಂಗ್ರೆಸ್ ನಾಯಕರು ಕೂಡಾ ತಮ್ಮ ಕ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ರಾತ್ರೋರಾತ್ರಿ ಇಂತಹುದೊಂದು ದುಷ್ಕೃತ್ಯವನ್ನು ಯಾರೂ ಕೂಡಾ ನಿರೀಕ್ಷಿಸಿರಲಿಲ್ಲ. ದುಷ್ಕರ್ಮಿಗಳು ಶಾಸಕರ ಮನೆ, ಪೊಲೀಸ್ ಠಾಣೆ ಸುಟ್ಟು ತಮ್ಮ ಕ್ರೌರ್ಯ ಮೆರೆದಿದ್ದಾರೆ. ಈ ಘಟನೆಯ ಕುರಿತಾಗಿ ವಿಜಯೇಂದ್ರ ಅವರು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ವಿಜಯೇಂದ್ರ ತಮ್ಮ ಟ್ವೀಟ್ ನಲ್ಲಿ “ಅಂದು ತನ್ವೀರ್ ಸೇಠ್,ಇಂದು ಅಖಂಡ ಶ್ರೀನಿವಾಸ ಮೂರ್ತಿ” ಕಾಂಗ್ರೆಸ್ ತಾನೇ ಗೊಬ್ಬರ ಹಾಕಿ ಪೋಷಿಸಿ,ರಕ್ಷಿಸಿದ SDPI, PFI ಎಂಬ ಒಂದೇ ಮುಖದ ವಿಧ್ವಂಸಕ ಸಂಘಟನೆಗಳು ಇಂದು ಕಾಂಗ್ರೆಸ್ ಶಾಸಕರುಗಳನ್ನೇ ಬಲಿ ತೆಗೆದುಕೊಳ್ಳಬೇಕೆಂಬಷ್ಟರ ಮಟ್ಟಿಗೆ ಭಯೋತ್ಪಾದನೆ ಸೃಷ್ಟಿಸುತ್ತಿದ್ದರೂ ಕಾಂಗ್ರೆಸ್ ಇನ್ನೂ ಈ ಸಂಘಟನೆಗಳ ವಿರುದ್ಧ ಸೊಲ್ಲೆತ್ತುತ್ತಿಲ್ಲವೇಕೆ? ಎಂದು ಪ್ರಶ್ನೆ ಮಾಡಿದ್ಸಾರೆ. ಅಲ್ಲದೇ ಅವರು ಮತ್ತೊಂದು ಟ್ವೀಟ್ ನಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಕೂಡಾ ಪ್ರಶ್ನೆ ಮಾಡಿದ್ದಾರೆ.‌

ಅವರು ತಮ್ಮ ಟ್ವೀಟ್ ನಲ್ಲಿ, ಪೊಲೀಸ್ ಠಾಣೆ, ಶಾಸಕರ ಮನೆಗೆ ಬೆಂಕಿ ಹಚ್ಚಿದ ಗಲಭೆಕೋರರನ್ನು ಕಟುವಾಗಿ ಖಂಡಿಸುವ ಬದಲು ಕೆಪಿಸಿಸಿ ಅಧ್ಯಕ್ಷರು ಮುಖ್ಯವಿಷಯ ಕೈಬಿಟ್ಟು, ಒಬ್ಬವ್ಯಕ್ತಿಯ ರಾಜಕೀಯ ಬೆಂಬಲ ಯಾರಿಗಿದೆ ಎಂದು ಕೆದಕಲು ಹೊರಟಿರುವುದು ಏಕೆ? ಯಾರನ್ನು ರಕ್ಷಿಸಲು ಈ ಕೀಳು ಪ್ರಯತ್ನ? ಇಂಥ ಸೂಕ್ಷ್ಮ ವಿಷಯಗಳಲ್ಲಿ ತಿಳಿಗೇಡಿತನದ ಮಾತುಗಳು ಸೂಕ್ತವಲ್ಲ ಡಿ.ಕೆ.ಶಿವಕುಮಾರ್ ರವರೇ! ಎಂದು ಹೇಳಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here