ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ವಿಷ್ಣು ಸ್ಮಾರಕ ನಿರ್ಮಾಣ ಮಾಡಲಿ ಎಂಬ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ನೀಡಿರುವ ಹೇಳಿಕೆಗೆ ಗರಂ ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನನ್ನ ಮೇಲೆ ದಬ್ಬಾಳಿಕೆ ಮಾಡಬಾರದು ಅದನ್ನು ನಾನು ಸಹಿಸುವುದಿಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.ಹಾಸನದಲ್ಲಿ ಮಾತನಾಡಿದ ಅವರು, ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ  ಅಳಿಯ ಅನಿರುದ್ ಮಾತಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಅವರಿಗೆ ಹೆಚ್ಚಿನ ಮಾಹಿತಿ ಇಲ್ಲ. ವಿಷ್ಣುವರ್ಧನ್ ಅವರು ನಿಧನರಾದಾಗ ನಾನು ಸರ್ಕಾರದ ಮುಖ್ಯಮಂತ್ರಿ ಆಗಿ ಅಧಿಕಾರದಲ್ಲಿ ಇರಲಿಲ್ಲ.

ವಿಷ್ಣು ಅವರ ಪ್ರಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಾನು ಹೋಗಿ ದರ್ಶನ ಪಡೆದಿದ್ದೆ. ಆಗ ನನ್ನ ಬಳಿ ಅಧಿಕಾರ ಇಲ್ಲದಿದ್ದರೂ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರೆ ಮಾಡಿ ಸ್ಮಾರಕ ನಿರ್ಮಿಸುವಂತೆ ಮನವಿ ಮಾಡಿದ್ದೆ. ವಿಷ್ಣು ಪರ ನಾನು ಇಷ್ಟೆಲ್ಲಾ ಹೋರಾಟ ಮಾಡಿದರೂ ನನ್ನನ್ನು ಉಡಾಫೆ ಮುಖ್ಯಮಂತ್ರಿ ಎನ್ನುವುದು ಎಷ್ಟು ಸರಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.ಹಿರಿಯ ನಟ ಹಾಗೂ ಮಾಜಿ ಸಚಿವ ಅಂಬರೀಶ್ ನಿಧನರಾದಾಗಲೂ ನಾನು ನನ್ನ ಜವಾಬ್ದಾರಿಯನ್ನು ನಿರ್ವಸಿದ್ದೇನೆ.

ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಅನ್ನು ಬಳಸಿ ಪ್ರಾರ್ಥಿವ ಶರೀರವನ್ನು ಮಂಡ್ಯಕ್ಕೆ ಕೊಂಡೊಯ್ದು ಅಲ್ಲಿನ ಜನರಿಗೆ ಅಂತಿಮ ದರ್ಶನ ಪಡೆಯಲು ಅವಕಾಶ ನೀಡಿದ್ದೆ. ವಿಷ್ಣು ಮತ್ತು ಅಂಬಿ ಜೊತೆ ನಾನೂ ಸಹ ಒಡನಾಡಿಯಾಗಿದ್ದೆ ಎಂದು ಸ್ಮರಿಸಿದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here