ಸಾಹಸ ಸಿಂಹ ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗ ಕಂಡ ಅದ್ಭುತವಾದ ಕಲಾವಿದೆ. ಚಂದನವನದ ಮೇರು ನಟರಲ್ಲಿ ಅವರಿಗೆ ಸ್ಥಾನ ಸದಾ ಇದ್ದೇ ಇರುತ್ತದೆ. ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಅವರು ಸ್ಥಾನವನ್ನು ಪಡೆದಿದ್ದಾರೆ. ವಿಷ್ಣುವರ್ಧನ್ ಅವರು ದೈಹಿಕವಾಗಿ ನಾಡಿ‌ನ ಜನರನ್ನು ಅಗಲಿದ ಮೇಲೆ, ಅವರ ಸ್ಮಾರಣ ನಿರ್ಮಾಣ ವಿಷಯ ಮಾತ್ರ ಒಂದಲ್ಲಾ ಒಂದು ಕಾರಣದಿಂದ ಸದಾ ಮುಂದಕ್ಕೆ ಹೋಗುತ್ತಲೇ ಇತ್ತು. ಆದರೆ ಈಗ ಸ್ಮಾರಕ ನಿರ್ಮಾಣ ಆರಂಭಕ್ಕೆ ಶುಭ ಘಳಿಗೆ ನಿಗಧಿಯಾಗಿದೆ. ಸಾಹಸಸಿಂಹನ ಸ್ಮಾರಕ ನಿರ್ಮಾಣಕ್ಕೆ ಮುಂದಿನ 3-4 ದಿನಗಳಲ್ಲಿ ರಾಜ್ಯ ಸರ್ಕಾರ ಶಂಕುಸ್ಥಾಪನೆ ನೆರವೇರಿಸಲಿದೆ ಎಂಬ ಶುಭ ಸಮಾಚಾರವೊಂದು ಈಗ ಅಭಿಮಾನಿಗಳಿಗೆ ಸಂತಸವನ್ನು ತಂದಿದೆ.

ಹಿರಿಯ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಅವರು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಬೇಕೆಂದು ಮನವಿ ಮಾಡಿದ್ದು, ಇದಕ್ಕೆ ಸಿಎಂ ಯಡಿಯೂರಪ್ಪನವರು ಕೂಡಾ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದು, ಸ್ಮಾರಕ ನಿರ್ಮಾಣ ವಿಷಯದಲ್ಲಿ ಎದುರಾಗಿರುವ ಎಲ್ಲಾ ತೊಡಕಿಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಆದ ಕಾರಣ ವರ್ಷಗಳ ಅಭಿಮಾನಿಗಳ ಬೇಡಿಕೆಗೆ ಈಗ ರೂಪ ನೀಡಲು ಸರ್ಕಾರ ಸಜ್ಜಾಗಿದ್ದು, ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಇನ್ನು ಮೂರ್ನಾಲ್ಕು ದಿನಗಳಲ್ಲಿ ಶಂಕು ಸ್ಥಾಪನೆ ನೆರವೇರಿಸಲಾಗುತ್ತದೆ.

ಮಾನ್ಯ ಮುಖ್ಯಮಂತ್ರಿಗಳು ಭಾರತಿ ವಿಷ್ಣುವರ್ಧನ್ ಅವರಿಗೆ ಸ್ಮಾರಕ ನಿರ್ಮಾಣಕ್ಕೆ ಅಗತ್ಯವಾದ ಭೂಮಿ, ಆರ್ಥಿಕ ನೆರವು ಸೇರಿದಂತೆ ಅಗತ್ಯವಿರುವ ಎಲ್ಲಾ ನೆರವನ್ನು ಸರ್ಕಾರದ ವತಿಯಿಂದ ನೀಡುವ ಭರವಸೆಯನ್ನು ಕೂಡಾ ನೀಡಿದ್ದಾರೆ. ಮುಖ್ಯಮಂತ್ರಿಗಳ ಭೇಟಿಯ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಭಾರತಿ ವಿಷ್ಣುವರ್ಧನ್ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರು ವಿಷ್ಣುವರ್ಧನ್ ಅವರ ಅಭಿಮಾನಿಯಾಗಿದ್ದು, ಸ್ಮಾರಕ ನಿರ್ಮಾಣದ ಕಾರ್ಯ ಆರಂಭಿಸುವುದರ ಬಗ್ಗೆ ಆಶ್ವಾಸನೆ ನೀಡಿದ್ದಾರೆ ಎಂದು ತಿಳಿಸುತ್ತಲೇ, ಸ್ಮಾರಕ ಯಾವ ಕಾರಣಕ್ಕೆ ವಿಳಂಬ ವಾಯಿತು ಎಂಬುದು ಈಗ ಅನಗತ್ಯವಾಗಿದ್ದು ಸರ್ಕಾರ ವಿಷ್ಣು ಸ್ಮಾರಕ ನಿರ್ಮಾಣ ನಿರ್ಮಿಸಲು ಮುಂದಾಗಿರುವುದು ಸಂತೋಷದ ವಿಷಯ ಎಂದಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here