ಮಾಜಿ ಸಂಸದ ವಿ.ಎಸ್. ಉಗ್ರಪ್ಪನವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದು, ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ರೂಪಾಯಿಯ ಮೌಲ್ಯದಲ್ಲಿ ಕುಸಿತ ಉಂಟಾಗುತ್ತಿದೆ ಎಂದು ಹೇಳಿದ್ದು, ಇದಕ್ಕೆ ಕಾರಣ ಮೋದಿಯವರ ಸರ್ಕಾರ ಎಂದಿದ್ದಾರೆ. ಉಗ್ರಪ್ಪನವರು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ರೀತಿ ಆರೋಪಗಳನ್ನು ಮಾಡಿದ್ದಾರೆ. ಅಲ್ಲದೆ ರಾಷ್ಟ್ರದಲ್ಲಿ ಬಡವರು ಜೀವನ ನಡೆಸುವುದು ಕಷ್ಟವಾಗುತ್ತಿದೆ ಎಂದು ಕೂಡಾ ಹೇಳಿದ್ದಾರೆ. ಅಲ್ಲದೆ ಇನ್ನೂ ಕೆಲವು ವಿಷಯವನ್ನು ಕೂಡಾ ಅವರು ಪ್ರಸ್ತಾಪ ಮಾಡಿದ್ದಾರೆ.

ದೇಶದಲ್ಲಿ ತೈಲ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಪೆಟ್ರೋಲ್ ಬೆಲೆ 100 ರೂಪಾಯಿ ಗಡಿಯನ್ನು ದಾಟುವ ಹಾಗಿದೆ ಪರಿಸ್ಥಿತಿ ಎಂದಿದ್ದಾರೆ ಉಗ್ರಪ್ಪನವರು. ದೇಶದಲ್ಲಿ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದ್ದು, ಬಡವರಿಗೆ ಅಗತ್ಯವಿರುವ ವಸ್ತುಗಳ ಬೆಲೆ ಏರುತ್ತಿದೆಯೆಂದು ಕಳವಳ ವ್ಯಕ್ತಪಡಿಸಿದ ಅವರು, ಕೇಂದ್ರ ಹಾಗೂ ರಾಜ್ಯ ಎರಡೂ ಕಡೆಗಳಲ್ಲಿ ಕೂಡಾ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಬಡವರು ಚಿನ್ನವನ್ನು ಖರೀದಿ ಮಾಡಲು ಕೂಡಾ ಸಾಧ್ಯವಿಲ್ಲದೇ ಆಗಿದೆ ಎಂದಿದ್ದಾರೆ.

ಇದೇ ಸಮಯದಲ್ಲಿ ಅವರು ನೆರೆ ಪರಿಹಾರದ ವಿಷಯದ ಬಗ್ಗೆ ಮಾತನಾಡುತ್ತಾ, ರಾಜ್ಯದ ಪ್ರವಾಹದ ಹಾನಿ ತುಂಬಲು ಕೇಂದ್ರ ಸರ್ಕಾರ ಹಣ ನೀಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪರಿಹಾರಕ್ಕಾಗಿ ಪ್ರಧಾನಿ ಮೋದಿಯವರ ಕಾಲಿಗೆ ಬೀಳುವುದೊಂದು ಬಾಕಿ ಇದೆ ಎಂದವರು ಹೇಳಿದ್ದಾರೆ. ಅಲ್ಲದೆ ಶಾಸಕ ಸೋಮಶೇಖರ ರೆಡ್ಡಿ ಅವರ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡುತ್ತ ಅಲ್ಪನಿಗೆ ಅಧಿಕಾರ ಬಂದರೆ ಏನಾಗುತ್ತದೆ ಎಂಬುದಕ್ಕೆ ಸೋಮಶೇಖರ ರೆಡ್ಡಿ ಮತ್ತು ಸಂಸದ ತೇಜಸ್ವಿ ಸೂರ್ಯ ಇಬ್ಬರೂ ಉತ್ತಮ ಉದಾಹರಣೆ ಎಂದು ಟೀಕೆ ಮಾಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here