Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘We the people of India ಮೂಲಕವೇ ಸಂವಿಧಾನ ತೆರೆದುಕೊಳ್ಳುತ್ತದೆ’- ಸಿಎಂ

ಬೆಂಗಳೂರು:We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ.ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜ ಕಲ್ಯಾಣ ಇಲಾಖೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನದ ಅಭೂತಪೂರ್ವ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ ಎಂದು ಎಚ್ಚರಿಸಿದರು.

ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದರು.

ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಚಿವರುಗಳಾದ ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ, ವಿಧಾನಪರಿಷತ್ ಸಭಾಪತಿ ಹೊರಟ್ಟಿ ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.