ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವೂ ಸುಮಾರು 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯನ್ನು ಹೊಂದಿದ್ದೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಅವರೇ ಪ್ರಧಾನಿಯಾಗಬೇಕೆಂಬುದೇ ಬಿಜೆಪಿ ಪಕ್ಷದ ಆಸೆ ಎಂದು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ನಾನು ಯಾರ ಬಳಿಯೂ ಮನವಿ ಮಾಡಿಲ್ಲ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡುವಂತೆ ಮನವಿ ಮಾಡಿಲ್ಲ. ಪಕ್ಷದ ಹೈಕಮಾಂಡ್