ಭಾರತ ಕ್ರಿಕೆಟ್ ತಂಡವು ಅಂಡರ್ 19 ವಿಶ್ವಕಪ್ ಪಂದ್ಯಾವಳಿಯಲ್ಲಿ ಕೋಚ್ ರಾಹುಲ್ ದ್ರಾವಿಡ್ ಅವರ ದಿಟ್ಟ ಮಾರ್ಗದರ್ಶನದಲ್ಲಿ ಮೈದಾನಕ್ಕೆ ಇಳಿದಿದ್ದ ಯುವ ಪಡೆಯು ಚಾಂಪಿಯನ್ ಪಟ್ಟ ಅಲಂಕರಿಸಿದೆ. ನ್ಯೂಜಿಲೆಂಡ್ ನ ಓವಲ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 8 ವಿಕೆಟ್ ಗಳಿಂದ ಭಾರತ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿ ಇತಿಹಾಸ ನಿರ್ಮಿಸಿದೆ. ಇದು ಕೋಚ್ ರಾಹುಲ್ ದ್ರಾವಿಡ್ ಅವರ ಪರಿಶ್ರಮಕ್ಕೆ ಸಿಕ್ಕ ಫಲ.ಹೌದು ಯುವ ಪಡೆಯನ್ನು ಕಟ್ಟುವಲ್ಲಿ ರಾಹುಲ್ ದ್ರಾವಿಡ್ ಅವಿರತ ಶ್ರಮಿಸಿದ್ದಾರೆ.

ಅಂತರಾಷ್ಟ್ರೀಯ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಚಾಂಪಿಯನ್ ಮಾಡಲೇಬೇಕು ಎಂಬ ಹಟದೊಂದಿಗೆ ಯುವ ಪಡೆಯೊಂದಿಗೆ ದ್ರಾವಿಡ್ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಂಡಿದ್ದರು. ಕಿರಿಯ ಕ್ರಿಕೆಟಿಗರ ಗಮನವೆಲ್ಲ ಆಟದತ್ತ ಹಾಗೂ ಗುರಿಯತ್ತ ಕೇಂದ್ರೀಕೃತವಾಗಬೇಕೆಂಬ ಉದ್ದೇಶದಿಂದ ಫೈನಲ್ ಪಂದ್ಯದ ತನಕ ಮೊಬೈಲ್ ಸ್ವಿಚ್ ಆಫ್ ಮಾಡುವಂತೆ ಕೋಚ್ ದ್ರಾವಿಡ್ ಸೂಚಿಸಿದ್ದರು.ಮತ್ತು ಎಲ್ಲರ ಮೇಲೆ ತೀವ್ರ ನಿಗಾ ವಹಿಸಿದ್ದರು ಮತ್ತು ತಂಡದ ಆಟಗಾರರ ಗಮನ ಐಪಿಎಲ್ ಬಿಡ್ಡಿಂಗ್ ಕಡೆ ಹೋಗದಂತೇ ಗಮನ ವಹಿಸಿದ್ದರು.

ಇಂತಹ ಕಟ್ಟುನಿಟ್ಟಿನ ಆದೇಶಗಳನ್ನು ಪರಿಪಾಲಿಸಿದ್ದರಿಂದಲೇ ಇಂದು ಭಾರತ ತಂಡ ಚಾಂಪಿಯನ್ ಆಗಿದೆ. ಇನ್ನು ಪಂದ್ಯಾವಳಿಯಲ್ಲಿ ಆಡಿದ್ದ 6 ಪಂದ್ಯಗಳಲ್ಲೂ ಭಾರತ ತಂಡ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತ್ತು. ಭಾರತ ಲೀಗ್ ಹಂತದ ಮೊದಲ ಪಂದ್ಯದಲ್ಲೇ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ತಾವು ಬಲಿಷ್ಠ ತಂಡ ಎಂಬುದನ್ನು ಸಾಬೀತುಪಡಿಸಿದ್ದರು. ಇನ್ನು ವಿಶ್ವಕಪ್ ಗೆದ್ದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.ಭಾರತ ಕ್ರಿಕೆಟ್ ತಂಡದ ದಿಗ್ಗಜರು ದ್ರಾವಿಡ್ ಪಡೆಗೆ ಹಾಡಿ ಹೊಗಳಿದ್ದಾರೆ.ಬಿ ಸಿ ಸಿ ಐ ನಿಂದ ಭಾರತ ತಂಡಕ್ಕೆ ಬಹುಮಾನ ಮೊತ್ತವಾಗಿ ಒಂದು ಕೋಟಿ ರೂ ನೀಡಿದೆ.ಇದರಲ್ಲಿ ರಾಹುಲ್ ದ್ರಾವಿಡ್ ಅವರಿಗೆ 50 ಲಕ್ಷ ಮತ್ತು ತಂಡದ ಆಟಗಾರರಿಗೆ 30 ಲಕ್ಷ ಮತ್ತು ತಂಡದ ಸಿಬ್ಬಂದಿ ವರ್ಗದವರಿಗೆ 20 ಲಕ್ಷ ಸಿಗಲಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here