ಕೊರೊನಾ ತನ್ನ ಅಟ್ಟಹಾಸವನ್ನು ಮೆರೆಯುತ್ತಿರುವ ಸಮಯದಲ್ಲಿ ಅದು ಎಲ್ಲಾ ಕಡೆ ಹಬ್ಬುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿಯಲ್ಲಿ ಕೊರೊನಾ ತೀವ್ರವಾಗಿ ಹರಡುತ್ತಿದೆ. ಅದರಲ್ಲೂ ಈಗ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮತ್ತೆ ಇಬ್ಬರು ಸಿಬ್ಬಂದಿಗೆ ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರಿಗೂ ಕೂಡಾ ಈಗ ಕೊರೊನಾ ಭೀತಿ ಆರಂಭವಾಗಿದೆ ಎನ್ನಲಾಗಿದೆ. ‌ಸಿಎಂ ಅವರ ಕಛೇರಿಯಲ್ಲೇ ಸೋಂಕು ಕಾಣಿಸಿಕೊಂಡಿರುವ ಕಾರಣದಿಂದ ಸಿಎಂ ಅವರ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.

ಯಡಿಯೂರಪ್ಪ ಅವರು ಇಂದು ತಮ್ಮ ಮನೆಯಲ್ಲೇ ಉಳಿದು ಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆಯಲಿರುವ ನಿವೃತ್ತಿ ಹೊಂದಿರುವ ವಿಧಾನ ಪರಿಷತ್ ಸದಸ್ಯರಿಗೆ ಬೀಳ್ಕೊಡುಗೆ ನೀಡುವ ಕಾರ್ಯಕ್ರಮಲ್ಲಿ ಅವರು ಗೈರು ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ. ಈ ದಿನ ಪೂರ್ತಿ ಸಿಎಂ ಅವರು ತಮ್ಮ ನಿವಾಸ ಕಾವೇರಿಯಲ್ಲಿ ಇರಲಿದ್ದಾರೆ ಎನ್ನಲಾಗಿದೆ‌. ಸಿಎಂ ಅವರ ಗೃಹ ಕಛೇರಿ ಕೃಷ್ಣಾ ಮತ್ತು ಸರ್ಕಾರಿ ನಿವಾಸ ಕಾವೇರಿ ಹಾಗೂ ಅಧಿಕೃತ ನಿವಾಸ ಧವಳಗಿರಿಯಲ್ಲಿ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ. ‌

ಈ ಮೂರು ನಿವಾಸಗಳಲ್ಲಿರುವ ಸಿಬ್ಬಂದಿಗೆ ಕಳೆದ ಕೆಲವು ದಿನಗಳಿಂದಲೂ ಕೂಡಾ ಸೋಂಕು ಪಾಸಿಟಿವ್ ಪತ್ತೆ ಆಗುತ್ತಿರುವ ಹಿನ್ನೆಲೆಯಲ್ಲಿ ಈಗ ಸಿಎಂಗೆ ಕೂಡಾ ಕೊರೊನ ಆತಂಕ ಎದುರಾಗಿದೆ ಎನ್ನುವಂತಿದೆ ವಾತಾವರಣ‌. ಅಲ್ಲದೇ ಸಿಎಂ ಅವರ ಕಾರು ಚಾಲಕನಿಗೂ ಕೊರೊನಾ ಪಾಸಿಟಿವ್ ಬಂದಿದೆ ಎಂದು ಹೇಳಲಾಗುತ್ತಿದೆ. ಇದರ ಜೊತೆಗೆ ಸಿಎಂ ಅವರ ಧವಳಗಿರಿ ನಿವಾಸದ ಅಡುಗೆ ನೌಕರನಿಗೂ ಸೋಂಕು ಇರುವುದು ದೃಢಪಟ್ಟಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here