ನಾಳೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕಾರ್ಯಕ್ಕೆ ಭೂಮಿ ಪೂಜೆಗೆ ಚಾಲನೆ ದೊರೆಯುವ ಶುಭ ಸಂದರ್ಭದಲ್ಲಿ ರಾಜ್ಯದ ದೇವಾಲಯಗಳಲ್ಲಿ ಕೂಡಾ ಪೂಜೆಗಳು ನಡೆಯಬೇಕೆಂದು ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆಗಳನ್ನು ನೀಡಿದ್ದಾರೆ. ಅವರು ಟ್ವೀಟ್ ಮಾಡಿದ್ದು ಅದರಲ್ಲಿ,
“ರಾಜ್ಯದ ಜನತೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪನವರ ಮನವಿ ಎನ್ನುತ್ತಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನಾಳೆ ಪ್ರಭು ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ ದೇಗುಲಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ.

ಈ ಸಂದರ್ಭದಲ್ಲಿ ನಮ್ಮ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಮತ್ತು ಪ್ರತಿ ಮನೆಗಳಲ್ಲಿ ಇಷ್ಟದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಬೇಕೆಂದು ಪ್ರಾರ್ಥಿಸಲು ರಾಜ್ಯದ ಜನತೆಯಲ್ಲಿ ಮನವಿ ಮಾಡುತ್ತೇನೆ. ಎಲ್ಲರಿಗೂ ಪ್ರಭು ಶ್ರೀರಾಮಚಂದ್ರ ಶಾಂತಿ, ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಕೂಡಾ ಪೂಜೆಗೆ ಸೂಚನೆಯನ್ನು ಅವರು ನೀಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here