ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪ್ರಮುಖವಾದ ಐದು ಹಗರಣಗಳ ಬಗ್ಗೆ ಸೂಕ್ತ ತನಿಖೆಯನ್ನು ನಡೆಸಲು ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ಆದೇಶವನ್ನು ನೀಡಿದ್ದಾರೆ. ಆ ಪ್ರಮುಖವಾದ ಐದು ಹಗರಣಗಳನು ಯಾವುವು? ಎನ್ನುವ ವಿಷಯಕ್ಕೆ ಬಂದರೆ 9014 ಕೋಟಿ ಮೊತ್ತದ ಕೃಷಿಭಾಗ್ಯ, 1066 ಕೋಟಿ ಮೊತ್ತದ ತ್ಯಾಜ್ಯ ವಿಲೇವಾರಿ ಹಗರಣ, 4010 ಕೋಟಿ ಮೊತ್ತದ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣಾ ಘಟಕಗಳ ನಿರ್ಮಾಣ ಹಗರಣ, 96 ಕೋಟಿ ಮೊತ್ತದ ತ್ಯಾಜ್ಯ ವಿಲೇವಾರಿ ವಾಹನಗಳ ಖರೀದಿ ನಿರ್ವಹಣಾ ಗುತ್ತಿಗೆ (ಟಿಪಿಎಸ್) ಹಗರಣ ಮತ್ತು ಬೆಳ್ಳಳ್ಳಿ, ಬಾಗಲೂರು, ಮಿಟ್ಟಗಾನಹಳ್ಳಿ ಕ್ವಾರಿಗಳಿಗೆ ಲೈನರ್‍ಗಳ ಅಳವಡಿಕೆಯ ಹೆಸರಿನಲ್ಲಿ ನಡೆದಿದೆ ಎನ್ನಲಾಗಿರುವ 109 ಕೋಟಿಯ ಹಗರಣಗಳು.

ಈ ಐದು ಹಗರಣಗಳ ಬಗ್ಗೆ ಸಮಗ್ರವಾದ ತನಿಖೆಯನ್ನು ನಡೆಸಿ, ಎರಡು ತಿಂಗಳೊಳಗೆ ಸಮಗ್ರ ವರದಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಅವರು ಆದೇಶವನ್ನು ನೀಡಿದ್ದಾರೆ. ಈ ಹಿಂದೆ ಈ ಹಗರಣಗಳ ವಿಷಯವಾಗಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಆರೋಪ ಮಾಡಿದ್ದನ್ನು ಕೂಡಾ ನಾವಿಲ್ಲಿ ಸ್ಮರಿಸಬಹುದಾಗಿದೆ. ಈ ಹಗರಣಗಳ ವಿಚಾರವಾಗಿ ಸಾಕಷ್ಟು ದೂರುಗಳು ಬಂದ ಕಾರಣ ಮತ್ತು ಇವುಗಳ ಬಗ್ಗೆ ಮಾದ್ಯಮಗಳಲ್ಲಿ ಕೂಡಾ ವರದಿಯಾಗಿರುವುದರಿಂದ ತನಿಖೆಗೆ ಆದೇಶ ನೀಡಲಾಗಿದೆ.

ಕೃಷಿ ಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ, ರಾಜ್ಯದ 131 ತಾಲ್ಲೂಕುಗಳಲ್ಲಿ ಆಯಾ ಜಿಲ್ಲಾ ಕೃಷಿ ನಿರ್ದೇಶಕರುಗಳು, ಖುದ್ದು ತಪಾಸಣೆಯನ್ನು ನಡೆಸಿ ಪರಿಶೀಲನಾ ವರದಿಯನ್ನು ಸಲ್ಲಿಸಬೇಕಯ ಎಂದು ಮುಖ್ಯ ಕಾರ್ಯದರ್ಶಿಯವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಇದರಿಂದ ಹಲವು ರಾಜಕಾರಣಿಗಳಿಗೆ, ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸಂಕಷ್ಟ ಎದುರಾಗುವ ಸಾಧ್ಯತೆಗಳು ದಟ್ಟವಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here