ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತೀಯ ಜನತಾಪಕ್ಷದ ಬಿಎಸ್ ಯಡಿಯೂರಪ್ಪ ನೇತೃತ್ವದ  ಸರ್ಕಾರ ರಚನೆಯಾಗಿ ಒಂದು ವಾರಗಳು ಕಳೆದರೂ ಇನ್ನೂ ಸಹ ಸಚಿವಸಂಪುಟ ವಿಸ್ತರಣೆ ಮಾಡದೇ ಅಭಿವೃದ್ಧಿಗಳು ಕುಂಟಿತವಾಗುತ್ತಿದೆ ಮತ್ತು ಆಡಳಿತ ಯಂತ್ರ ಸಂಪೂರ್ಣ ಸ್ಥಗಿತವಾಗಿದೆ  ಎಂದು  ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಈ ರೀತಿಯಲ್ಲಿ ಇದೆ…..

“ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ಅವರು ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ,ಕೃಷಿ,ಗ್ರಾಮೀಣ ಅಭಿವೃದ್ದಿ ಇಲಾಖೆಗಳಿಗೆ ಸಚಿವರೇ ಇಲ್ಲ.

ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ?
ಸಂಪುಟ ವಿಸ್ತರಣೆಯದ್ದೇ? ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ ? ಎಂದು ಟ್ವಿಟ್ಟರ್ ಖಾತೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here