ರಾಜಕಾರಣಿಗಳು ದಿನಕ್ಕೊಂದು ಹೊಸ ಹೇಳಿಕೆ‌ ನೀಡುವುದು ಸಾಮಾನ್ಯ. ಮಾನ್ಯ ಸಿಎಂ ಆದ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿರುವುದು ನನ್ನ ಕಾರಣದಿಂದಾಗಿ ಎಂದು ಹೇಳಿದ್ದಾರೆ ಅನರ್ಹಗೊಂಡಿರುವ ಶಾಸಕ ಎಚ್‌. ವಿಶ್ವನಾಥ್‌ ಅವರು. ಅವರ ಹೇಳಿಕೆ ಎಲ್ಲರ ಗಮನವನ್ನು ಸೆಳೆದಿದೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಇರುವ ಸುತ್ತೂರು‌ ಮಠದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ವಿಶ್ವನಾಥ್ ಅವರು ನಾವು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಇಂದು ಯಾವುದೇ ಚರ್ಚೆಯನ್ನು ನಡೆಸಿಲ್ಲವೆಂದೂ, ಅವರನ್ನು ಫುಲ್ ಫ್ರೀ ಆಗಿ ಬಿಟ್ಟಿದ್ದೇವೆ ಎಂದು ಅವರು ಹೇಳಿದ್ದಾರೆ.

ಮುಂಬರಲಿರುವ ಉಪಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಿಂದ ನಾನಾಗಲಿ ಅಥವಾ ನನ್ನ ಕುಟುಂಬ ಸದಸ್ಯರಲ್ಲಿ ಒಬ್ಬರು ಸ್ಪರ್ಧಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ ಅವರು ಯಾವುದೇ ಕಾರಣಕ್ಕೂ ನಮ್ಮ ಕುಟುಂಬವುಬ ಉಪಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟವಾದ ಮಾಹಿತಿಯನ್ನು ಅವರು ನೀಡಿದ್ದಾರೆ. ಸುತ್ತೂರು ಶ್ರೀಗಳು ನೀಡಿದ್ದ ಆಹ್ವಾನವನ್ನು ಸ್ವೀಕರಿಸಿ ಸುತ್ತೂರು ಶಾಖಾ ಮಠಕ್ಕೆ ಬಂದು ಶ್ರೀಗಳ ಆಶೀರ್ವಾದ ಪಡೆದುಕೊಂಡಿದ್ದೇನೆ. ಇದು ನಮ್ಮೆಲ್ಲರ ಮಠವಾಗಿದೆ.

ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅವರ ಹೇಳಿಕೆ ಎಲ್ಲರ ಗಮನವನ್ನು ಸೆಳೆದಿದ್ದು, ಅವರು ನೀಡಿರುವ ಹೇಳಿಕೆ ನೇರವಾಗಿಯೇ ಮಾನ್ಯ ಸಿಎಂ ಅವರಾದ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿರುವುದು ಅನರ್ಹ ಶಾಸಕರಿಂದ ಎಂದು ಹೇಳಿದ್ದಾರೆ. ಇನ್ನು ಈ‌ ಹೇಳಿಕೆಗೆ ಯಾವ ರೀತಿಯ ಪ್ರತಿಕ್ರಿಯೆಗಳು ಬರಲಿವೆ ಎಂಬುದನ್ನು ಕಾದು ನೋಡಬೇಕಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here