ವೈದ್ಯಕೀಯ ಕಾಲೇಜು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಆಗುವ ಮೂಲಕ ಕನಕಪುರಕ್ಕೆ ರದ್ದಾದ ಬೆನ್ನಲ್ಲೇ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗ ಸಿಎಂ ಬಿ.ಎಸ್.ಯಡಿಯೂರಪ್ಪರನ್ನ ಭೇಟಿ ಮಾಡಿ ಕನಕಪುರಕ್ಕೆ ವೈದ್ಯಕೀಯ ಕಾಲೇಜು ನೀಡುವಂತೆ ಮನವಿ ಸಲ್ಲಿಸಿದೆ.ಕನಕಪುರದಿಂದ ವೈದ್ಯಕೀಯ ಕಾಲೇಜು ಸ್ಥಳಾಂತರ ರದ್ದು ಸೇರಿದಂತೆ ರಾಮನಗರ, ಕುಣಿಗಲ್, ಮಾಗಡಿ ಸೇರಿದಂತೆ

ಬೆಂಗಳೂರು ಗ್ರಾಮಂತರ ಲೋಕಸಭೆ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಸಂಬಂಧ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದ ಸ್ಥಳೀಯ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ವಿಧಾನಸೌಧಧ ಸಿಎಂ ಕಚೇರಿಯಲ್ಲಿ ಮಂಗಳವಾರ ಭೇಟಿ ಮಾಡಿ ಚರ್ಚಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕುಣಿಗಲ್ ಶಾಸಕ ಡಾ. ರಂಗನಾಥ್, ವಿಧಾನಪರಿಷತ್ ಸದಸ್ಯರಾದ ಸಿ.ಎಂ. ಲಿಂಗಪ್ಪ, ಎಚ್.ಎಂ. ರೇವಣ್ಣ, ಎಸ್. ರವಿ ಹಾಜರಿದ್ದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here