
ಕನ್ನಡ ಚಿತ್ರರಂಗದ ಜನಪ್ರಿಯ ಸೂಪರ್ ಸ್ಟಾರ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಗಂಡು ಮಗುವಿಗೆ ತಂದೆಯಾಗಿದ್ದಾರೆ. ಕಳೆದ ವರ್ಷ ಡಿಸೆಂಬರ್ನಲ್ಲಿ ರಾಕಿಂಗ್ ಸ್ಟಾರ್ ಯಶ್ ಮತ್ತು ಖ್ಯಾತ ನಟಿ ರಾಧಿಕಾ ಪಂಡಿತ್ ದಂಪತಿಗಳಿಗೆ ಮುದ್ದಾದ ಹೆಣ್ಣು ಮಗು ಜನಿಸಿತ್ತು. ಇಂದು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಗಳಿಗೆ ಮುದ್ದಾದ ಗಂಡು ಮಗು ಜನನ ವಾಗಿದೆ.
ರಾಧಿಕಾ ಪಂಡಿತ್ ಇಂದು ಮುಂಜಾನೆ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಸ್ಟಾರ್ ಯಶ್ ಕುಟುಂಬದ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ. ಸದ್ಯ ಯಶ್ ಮತ್ತು ರಾಧಿಕಾ ಪಂಡಿತ್ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮತ್ತು ರಾಧಿಕಾ ಪಂಡಿತ್ ಅಭಿಮಾನಿಗಳು ಖುಷಿಯಾಗಿದ್ದಾರೆ.
ಇತ್ತೀಚೆಗೆ ರಾಧಿಕಾ ಪಂಡಿತ್ ಸೀಮಂತ ಕಾರ್ಯಕ್ರಮ ಮಾಡಿಕೊಂಡಿದ್ದರು. ಈ ಕಾರ್ಯಕ್ರಮವನ್ನು ರಾಧಿಕಾ ಸ್ನೇಹಿತರು ಆಯೋಜಿಸಿ ಅವರಿಗೆ ಸರ್ಪ್ರೈಸ್ ನೀಡಿದ್ದರು. ರಾಧಿಕಾ ಕಾರ್ಯಕ್ರಮದ ಫೋಟೋವೊಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು ಅದಕ್ಕೆ ನನ್ನ ಸ್ನೇಹಿತರು ನನಗೆ ಸೀಮಂತ ಪಾರ್ಟಿ ನೀಡಿದ್ದರು. ಈ ಪಾರ್ಟಿ ನೀಡಿದ ಎಲ್ಲ ಆಂಟಿಗಳಿಗೆ ಧನ್ಯವಾದಗಳು ಎಂದು ಬರೆದು ಪೋಸ್ಟ್ ಮಾಡಿದ್ದರು.
ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.