ಕನ್ನಡ ಚಿತ್ರರಂಗದಲ್ಲಿ  ಹೊಸ ದಾಖಲೆ ನಿರ್ಮಿಸಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಂತೋಷ್ ಆನಂದ್ ರಾಮ್ ನಿರ್ದೇಶನದ ರಾಜಕುಮಾರ ಚಿತ್ರದ ಬಳಿಕ ಪುನೀತ್ ರಾಜಕುಮಾರ್ ಮತ್ತು ಸಂತೋಷ್ ಆನಂದ್ ರಾಮ್ ಜೋಡಿ ಮತ್ತೆ ಒಂದಾಗಿ ಕೆಲಸ  ಮಾಡುತ್ತಿರುವ ಸಿನಿಮಾ ಯುವರತ್ನ. ಹೊಂಬಾಳೆ ಬ್ಯಾನರ್ ನಿರ್ಮಿಸುತ್ತಿರುವ ಯುವರತ್ನ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ಯುವರತ್ನ ಚಿತ್ರದ ಟೀಸರ್ ರಿಲೀಸ್ ಬಗ್ಗೆ ಅಭಿಮಾನಿಗಳು ಸೋಶಿಯಲ್ ಮೀಡಿಯಾ ದಲ್ಲಿ ಹೇಳಿಕೊಂಡಿದ್ದರು. ಅಭಿಮಾನಿಗಳ ಒತ್ತಾಯಕ್ಕೆ ಮಣಿದಿದ್ದ ನಿರ್ದೇಶಕ ಸಂತೋಷ್ ಆನಂದ್ ರಾಮ್  ಅವರು ಯುವರತ್ನ ಚಿತ್ರದ ಟೀಸರ್ ಬಿಡುಗಡೆ ದಿನಾಂಕವನ್ನು ಪ್ರಕಟಿಸುವುದಾಗಿ ತಿಳಿಸಿದ್ದರು. ಅದರಂತೆ ಬಹುನಿರೀಕ್ಷಿತ ಯುವರತ್ನ ಚಿತ್ರದ ಟೀಸರ್ ಬಿಡುಗಡೆ ದಿನಾಂಕವನ್ನು ಇಂದು ಅಧಿಕೃತವಾಗಿ ಬಹಿರಂಗ ಪಡಿಸಲಾಗಿದೆ.

ಅಕ್ಟೋಬರ್ ಮೊದಲವಾರ ಅಂದರೆ ದಸರಾ ಹಬ್ಬದ ಪ್ರಯುಕ್ತ ಯುವರತ್ನ ಚಿತ್ರದ ಟೀಸರ್ ಬಿಡುಗಡೆ ಯಾಗಲಿದೆ ಎಂದು ಇಂದು ಅಧಿಕೃತವಾಗಿ ಚಿತ್ರತಂಡ ತಿಳಿಸಿದೆ. ಯುವರತ್ನ ಚಿತ್ರದ ಬಗ್ಗೆ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ನಿರೀಕ್ಷೆಗಳಿವೆ ರಾಜಕುಮಾರ ಚಿತ್ರದಂತಹ ಬ್ಲಾಕ್ ಬಸ್ಟರ್ ಚಿತ್ರ ಕೊಟ್ಟಿದ್ದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕಾಂಬಿನೇಷನ್ ನಲ್ಲಿ ಯುವರತ್ನ ಸಿನಿಮಾ ಮೂಡಿಬರುತ್ತಿದೆ.

ಇನ್ನು ಯುವರತ್ನ ಚಿತ್ರದಲ್ಲಿ ದೊಡ್ಡ ತಾರಾ ಬಳಗವೇ ಇದೆ. ಪುನೀತ್ ರಾಜಕುಮಾರ್ ಅವರಿಗೆ ಜೋಡಿಯಾಗಿ ಮೊದಲ ಬಾರಿ ಕನ್ನಡದಲ್ಲಿ ಸಯೇಶಾ ಅಭಿನಯಿಸುತ್ತಿದ್ದಾರೆ. ಪುನೀತ್ ರಾಜಕುಮಾರ್ ಜೊತೆಗೆ ಯುವರತ್ನ ಚಿತ್ರದಲ್ಲಿ ವಿಶೇಷ ಪಾತ್ರಗಳಲ್ಲಿ ದಿಗಂತ್, ಧನಂಜಯ್, ಸಾಯಿಕುಮಾರ್, ಕುರಿ ಪ್ರತಾಪ್, ಸುಧಾರಾಣಿ,  ರವಿಶಂಕರ್, ಗುರುದತ್ ಅಚ್ಚುತ್ ಕುಮಾರ್ ಮತ್ತು ಪ್ರಕಾಶ್ ಬೆಳವಾಡಿ ಸೇರಿ ಹಲವಾರು ಕಲಾವಿದರು ನಟಿಸುತ್ತಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here